ಬೆಂಗಳೂರು:
ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕಗೊಂಡ ಎಸ್.ಆರ್. ವಿಶ್ವನಾಥ್ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿಗೆ ರಾಜೀನಾಮೆ ಪತ್ರ ರವಾನಿಸಿರುವ ಎಸ್.ಆರ್.ವಿಶ್ವನಾಥ್ ,ತಮ್ಮೊಂದಿಗೆ ಇದುವರೆಗೆ ಸೇವೆ ಸಲ್ಲಿ ಸಲು ಅವಕಾಶ ಮಾಡಿದ್ದಕ್ಕಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.ನನಗೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಹಿನ್ನಲೆಯಲ್ಲಿ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇ ನೆ ಎಂದು ತಿಳಿಸಿದ್ದಾರೆ.