SSLC student committed suicide by hanging himself on the exam day in Shimoga | ಶಿವಮೊಗ್ಗದಲ್ಲಿ ಪರೀಕ್ಷಾ ದಿನವೇ ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ
ಶಿವಮೊಗ್ಗ: ಜಿಲ್ಲೆ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ಪರೀಕ್ಷಾ ದಿನವೇ ಎಸ್ಎಸ್ಎಲ್ಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. 16 ವರ್ಷದ ಪರಶುರಾಮ್ ಬಾಬು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎನ್ನಲಾಗಿದೆ.
ಆನಂದಪುರದ KPSC ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ, ಚೆನ್ನಾಗಿಯೇ ಓದುತ್ತಿದ್ದ. ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದ. ಆದ್ರೆ ಕೊನೇ ಕ್ಷಣದಲ್ಲಿ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.
ಈ ಸಂಬಂಧ ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
