ಬೆಂಗಳೂರು:
ಇಂದು ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಫಲಿತಾಂಶವನ್ನು ವೆಬ್ ಸೈಟ್ http://karresults.nic.in ನಲ್ಲಿ ಬೆಳಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಜೂನ್ 12 ರಿಂದ 19ರವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ನಡೆದಿತ್ತು. ಇದೀಗ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದ್ದು, ಅಧಿಕೃತ ವೆಬ್‌ಸೈಟ್‌ಗಳಾದ http://kseab.karnataka.gov.in ಅಥವಾ http://karresults.nic.in ಫಲಿತಾಂಶ ಬಿಡುಗಡೆಯಾಗಲಿದೆ.
ಮೇ ನಲ್ಲಿ ಪ್ರಕಟವಾಗಿದ್ದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಒಟ್ಟು 7,00,619 ವಿದ್ಯಾರ್ಥಿಗಳು ಪಾಸ್ ಆಗಿದ್ದರು. ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮತ್ತು ಫಲಿತಾಂಶವನ್ನು ತಿರಸ್ಕರಿಸಿದ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗಿತ್ತು.