ನ.25ರಿಂದ ಅನ್ ಲೈನ್ ಅರ್ಜಿ ಆಹ್ವಾನ
ಬೆಂಗಳೂರು:
ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡವರಿಗೆ ಹಣ ವಾಪಸ್ ಕೊಡಿಸಲು ರಾಜ್ಯ ಸರ್ಕಾರ ಪ್ರಕ್ರಿಯೆ ಆರಂಭಿಸಿದ್ದು ನ.25ರಿಂದ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಐಎಂಎ ಹಗರಣದ ಸಕ್ಷಮ ಪ್ರಾಧಿಕಾರ ಹಾಗೂ ವಿಶೇಷ ಅಧಿಕಾರಿ ಹರ್ಷಗುಪ್ತ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಠೇವಣಿದಾರರು ಡಿಸೆಂಬರ್ 24ರೊಳಗಾಗಿ ಅರ್ಜಿ ಸಲ್ಲಿಸಬೇಕು. ಎರಡು ಹಂತದಲ್ಲಿ ಅರ್ಜಿ ಸಲ್ಲಿಕೆ ಅವಕಾಶವಿದ್ದು, ಮೊದಲ ಹಂತದಲ್ಲಿ ವೈಯಕ್ತಿಕ ವಿವರ, ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆಗಳನ್ನು ನೀಡಬೇಕು, 2ನೇ ಹಂತದಲ್ಲಿ ಐಎಂಎಗೆ ಹಣ ಹೂಡಿದ ಮಾಹಿತಿ ಒದಗಿಸಬೇಕು ಎಂದು ತಿಳಿಸಿದರು.
ಮಧ್ಯವರ್ತಿಗಳ ಮೊರೆ ಹೋಗದೆ ನೇರವಾಗಿ ಬೆಂಗಳೂರು 1, ಕರ್ನಾಟಕ 1, ಅಟಲ್ ಜಿ ಜನಸ್ನೇಹಿ ಕೇಂದ್ರಅಥವಾ ಖುದ್ದಾಗಿ ತಾವೇ ಆನ್ಲೈ ನ್ ಅರ್ಜಿಗಳನ್ನು ಸಲ್ಲಿಸುವಂತೆ ಸಲಹೆ ನೀಡಿದರು.