ಗಾಂಧಿ ಬಜಾರ್ನಲ್ಲಿ ಗುರುತಿಸಿದ ಸ್ಥಳದಲ್ಲಷ್ಟೇ ಬೀದಿಬದಿ ವ್ಯಾಪಾರಕ್ಕೆ ಅವಕಾಶ
ಬೆಂಗಳೂರು, ಜುಲೈ 20: ಗಾಂಧಿ ಬಜಾರ್ನಲ್ಲಿ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗದಲ್ಲಿ ಗುರುತಿಸಿ ಗೆರೆ ಎಳೆಯಲಾದ ಸ್ಥಳಗಳಲ್ಲಷ್ಟೇ ವ್ಯಾಪಾರ ನಡೆಸಬೇಕು ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ಜಗದೀಶ್ ಜಿ. ಸೂಚಿಸಿದರು.
ಚಿಕ್ಕಪೇಟೆ ವಿಭಾಗದ ಗಾಂಧಿ ಬಜಾರ್ ಮುಖ್ಯರಸ್ತೆಯ ಪಾದಚಾರಿ ಮಾರ್ಗಗಳ ಎರಡೂ ಬದಿಗಳಲ್ಲಿ ಮಾನ್ಯ ಹೈಕೋರ್ಟ್ ಆದೇಶದಂತೆ ಈಗಾಗಲೇ ಲೈನ್ ಮಾರ್ಕಿಂಗ್ ಮಾಡಲಾಗಿದ್ದು, ಗುರುತಿಸಲಾದ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ನಡೆಸುವಂತೆ ಬೀದಿಬದಿ ವ್ಯಾಪಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಸಭೆಯಲ್ಲಿ ತಿಳಿಸಿದರು.
ಗುರುತಿಸಲಾದ ಸ್ಥಳವನ್ನು ಬಿಟ್ಟು ಪಾದಚಾರಿ ಮಾರ್ಗವನ್ನು ಅತಿಕ್ರಮಿಸಿ ವ್ಯಾಪಾರ ನಡೆಸುವುದರಿಂದ ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತದೆ. ಆದ್ದರಿಂದ ಲೈನ್ ಮಾರ್ಕಿಂಗ್ ಮೀರಿ ಅತಿಕ್ರಮಣ ಮಾಡಿಕೊಂಡು ವ್ಯಾಪಾರ ನಡೆಸುವವರನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಅಭಿವೃದ್ಧಿ ಅಪರ ಆಯುಕ್ತ ವೆಂಕಟಾಚಲಪತಿ, ಜಂಟಿ ಆಯುಕ್ತ ಹೇಮಂತ್ ಶರಣ್, ಕಾರ್ಯಪಾಲಕ ಅಭಿಯಂತರರು, ಕಲ್ಯಾಣ ವಿಭಾಗದ ಸಹಾಯಕ ಕಂದಾಯ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.