Home ಬೆಂಗಳೂರು ನಗರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ; ಮುಖ್ಯಮಂತ್ರಿ

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ; ಮುಖ್ಯಮಂತ್ರಿ

27
0

ಬೆಂಗಳೂರು:

ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದು ಮುಖ್ಯಮಂತ್ರಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ಡೈನಾಮೈಟ್‌ ಲಾರಿ ಸ್ಫೋಟಗೊಂಡು 6ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದು ದುರದೃಷ್ಟಕರ. ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಕುಟಂಬದವರಿಗೆ ನನ್ನ ಸಂತಾಪಗಳನ್ನು ಸೂಚಿಸುತ್ತೇನೆ. ಈ ದುರ್ಘಟನೆಯಲ್ಲಿ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here