
ಬೆಂಗಳೂರು: ರಾಜ್ಯಾದ್ಯಂತ ನಡೆಯುತ್ತಿರುವ ಜಾತಿ ಗಣತಿ ಸಮೀಕ್ಷೆ ವೇಳೆ ಇಂದು ಸಮೀಕ್ಷಾಧಿಕಾರಿಗಳು ಸುಧಾ ಮೂರ್ತಿ ಮತ್ತು ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ನಿವಾಸಕ್ಕೆ ಭೇಟಿ ನೀಡಿದಾಗ, ಈ ದಂಪತಿ ಜಾತಿ ಗಣತಿಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.
ಸಮೀಕ್ಷಾಧಿಕಾರಿಗಳಿಗೆ ಅವರು ಬರೆದು ನೀಡಿದ ಪತ್ರದಲ್ಲಿ, “ನಾವು ಯಾವುದೇ ಹಿಂದುಳಿದ ವರ್ಗಕ್ಕೆ ಸೇರಿಲ್ಲ. ಈ ಸಮೀಕ್ಷೆಯಿಂದ ನಮಗೆ ಯಾವುದೇ ಉಪಯೋಗವಿಲ್ಲ. ಆದ್ದರಿಂದ ನಾವು ಜಾತಿ ಗಣತಿಯಲ್ಲಿ ಭಾಗವಹಿಸುವುದಿಲ್ಲ,” ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

ಸ್ವಹಸ್ತಾಕ್ಷರದ ಸ್ವಯಂ ದೃಢೀಕರಣ ಪತ್ರದ ಮೂಲಕ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದು, ಈ ಘಟನೆ ಇಂದು ಬೆಂಗಳೂರಿನಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ರಾಜ್ಯ ಸರ್ಕಾರ ಕೈಗೊಂಡಿರುವ ಜಾತಿ ಗಣತಿ ಕಾರ್ಯಾಚರಣೆಗೆ ಕೆಲ ವಲಯಗಳಲ್ಲಿ ಬೆಂಬಲ ವ್ಯಕ್ತವಾಗುತ್ತಿದ್ದರೆ, ಇನ್ನು ಕೆಲವರು ಅದನ್ನು ಪ್ರಶ್ನಿಸುತ್ತಿದ್ದಾರೆ. ಈ ನಡುವೆ ಸುಧಾ ಮೂರ್ತಿ–ನಾರಾಯಣ ಮೂರ್ತಿ ದಂಪತಿಯ ನಿರಾಕರಣೆ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.