Home High Court/ಹೈಕೋರ್ಟ್ Karnataka High Court | ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ , ಕೃಷ್ಣನ್ ನಟರಾಜನ್...

Karnataka High Court | ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ , ಕೃಷ್ಣನ್ ನಟರಾಜನ್ , ನೆರನಹಳ್ಳಿ ಶ್ರೀನಿವಾಸನ್ ಸಂಜಯ್ ಗೌಡ, ದೀಕ್ಷಿತ್ ಕೃಷ್ಣ ಶ್ರೀಪಾದ್ ಅವರ ವರ್ಗಾವಣೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು

43
0
Karnataka High Court

ನವ ದೆಹಲಿ: ಕರ್ನಾಟಕದ ನಾಲ್ವರು ಸೇರಿದಂತೆ ಏಳು ಹೈಕೋರ್ಟ್ ನ್ಯಾಯಾಧೀಶರ ವರ್ಗಾವಣೆಗೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅಧ್ಯಕ್ಷತೆಯ ಕೊಲಿಜಿಯಂ ಹೊರಡಿಸಿದ ಹೇಳಿಕೆಯಲ್ಲಿ, “ಹೈಕೋರ್ಟ್‌ಗಳಲ್ಲಿ ವೈವಿಧ್ಯತೆಯನ್ನು ಹೆಚ್ಚಿಸುವ ಮತ್ತು ನ್ಯಾಯಾಂಗದ ಆಡಳಿತದ ಗುಣಮಟ್ಟವನ್ನು ಬಲಪಡಿಸುವ ಉದ್ದೇಶದಿಂದ, ಸುಪ್ರೀಂ ಕೋರ್ಟ್ ಕೊಲಿಜಿಯಂ ಎಪ್ರಿಲ್ 15, 2025 ಮತ್ತು ಎಪ್ರಿಲ್ 19, 2025 ರಂದು ನಡೆದ ಸಭೆಗಳಲ್ಲಿ ನ್ಯಾಯಾಲಯಗಳ ನ್ಯಾಯಾಧೀಶರ ವರ್ಗಾವಣೆಗೆ ಶಿಫಾರಸು ಮಾಡಿದೆ” ಎಂದು ತಿಳಿಸಿದೆ.

ಕರ್ನಾಟಕ ಹೈಕೋರ್ಟ್‌ನಿಂದ, ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರನ್ನು ಮದ್ರಾಸ್ ಹೈಕೋರ್ಟ್‌ಗೆ, ನ್ಯಾಯಮೂರ್ತಿ ಕೃಷ್ಣನ್ ನಟರಾಜನ್ ಅವರನ್ನು ಕೇರಳಕ್ಕೆ, ನ್ಯಾಯಮೂರ್ತಿ ನೆರನಹಳ್ಳಿ ಶ್ರೀನಿವಾಸನ್ ಸಂಜಯ್ ಗೌಡ ಅವರನ್ನು ಗುಜರಾತ್‌ಗೆ ಮತ್ತು ನ್ಯಾಯಮೂರ್ತಿ ದೀಕ್ಷಿತ್ ಕೃಷ್ಣ ಶ್ರೀಪಾದ್ ಅವರನ್ನು ಒಡಿಶಾ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಶಿಫಾರಸು ಮಾಡಲಾಗಿದೆ.

ನ್ಯಾಯಮೂರ್ತಿ ಪೆರುಗು ಶ್ರೀ ಸುಧಾ ಅವರನ್ನು ತೆಲಂಗಾಣ ಹೈಕೋರ್ಟ್‌ ನಿಂದ ಕರ್ನಾಟಕಕ್ಕೆ, ತೆಲಂಗಾಣ ಹೈಕೋರ್ಟ್‌ನ ನ್ಯಾಯಮೂರ್ತಿ ಕಸೋಜು ಸುರೇಂದರ್ ಅಲಿಯಾಸ್ ಕೆ ಸುರೇಂದರ್ ಅವರನ್ನು ಮದ್ರಾಸ್ ಹೈಕೋರ್ಟ್‌ಗೆ ಮತ್ತು ಆಂಧ್ರಪ್ರದೇಶ ಹೈಕೋರ್ಟ್‌ ನಿಂದ ನ್ಯಾಯಮೂರ್ತಿ ಕುಂಭಾಜದಲ ಮನ್ಮಧ ರಾವ್ ಅವರನ್ನು ಕರ್ನಾಟಕಕ್ಕೆ ವರ್ಗಾಯಿಸಲು ಶಿಫಾರಸು ಮಾಡಲಾಗಿದೆ.

ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ , ಕೃಷ್ಣನ್ ನಟರಾಜನ್ , ನೆರನಹಳ್ಳಿ ಶ್ರೀನಿವಾಸನ್ ಸಂಜಯ್ ಗೌಡ, ದೀಕ್ಷಿತ್ ಕೃಷ್ಣ ಶ್ರೀಪಾದ್ ಅವರನ್ನು ಒಡಿಶಾ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಶಿಫಾರಸು ಮಾಡಲಾಗಿದೆ.

LEAVE A REPLY

Please enter your comment!
Please enter your name here