Home ರಾಜಕೀಯ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ‌ ಕೋರ್ಟ್

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ‌ ಕೋರ್ಟ್

6
0

ನವದೆಹಲಿ: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಈ ಕುರಿತು ವಿಚಾರಣೆಯನ್ನು ನಡೆಸಿ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಪ್ರಜ್ವಲ್ ರೇವಣ್ಣ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ವಾದವನ್ನು ಮಂಡಿಸಿದ್ದು, ದೂರಿನಲ್ಲಿ ಐಪಿಸಿ ಸೆಕ್ಷನ್ 376 ಅಥವಾ ಅತ್ಯಾಚಾರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದಿದ್ದರು. ಆದರೆ ನ್ಯಾಯಮೂರ್ತಿ ತ್ರಿವೇದಿ ಅವರು ಹಲವಾರು ಇತರ ದೂರುಗಳಿವೆ ಎಂದು ಹೇಳಿದ್ದಾರೆ.

ಅಕ್ಟೋಬರ್ 21ರಂದು, ಕರ್ನಾಟಕ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆ ಅವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

LEAVE A REPLY

Please enter your comment!
Please enter your name here