Home ಹುಬ್ಬಳ್ಳಿ Hubli | ನೇಹಾ ಹಿರೇಮಠ್ ಮನೆಗೆ ಸುರ್ಜೆವಾಲ ಭೇಟಿ

Hubli | ನೇಹಾ ಹಿರೇಮಠ್ ಮನೆಗೆ ಸುರ್ಜೆವಾಲ ಭೇಟಿ

30
0
Surjewala visits Neha Hiremath's house

ಹುಬ್ಬಳ್ಳಿ : ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಹತ್ಯೆಯಾದ ನೇಹಾ ಹಿರೇಮಠ್ ಮನೆಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಭೇಟಿ ನೀಡಿ ನೇಹಾ ಪೋಷಕರಿಗೆ ಸಾಂತ್ವನ ಹೇಳಿದರು.

ಬಿಡನಾಳದಲ್ಲಿರುವ ನೇಹಾ ಹಿರೇಮಠ್ ನಿವಾಸಕ್ಕೆ ಆಗಮಿಸಿದ ಸುರ್ಜೆವಾಲಾ ಅವರು, ನಿರಂಜನಯ್ಯ ಹಿರೇಮಠ ಹಾಗೂ ಅವರ ಕುಟುಂಬಕ್ಕೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಇನ್ನೂ ಸಚಿವರಾದ ಸಂತೋಷ್ ಲಾಡ್, ಎಚ್.ಕೆ.ಪಾಟೀಲ್,‌ ದಾರವಾಡ ಲೋಕಸಭಾ ಅಭ್ಯರ್ಥಿ ವಿನೋದ್ ಅಸೂಟಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಂತ್ವನ ಹೇಳಿದರು.

ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಸುರ್ಜೆವಾಲ ಅವರು,‌ “ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ್ ಹಿರೇಮಠ ಪುತ್ರಿ ಅಲ್ಲ. ಇಡೀ ಕರ್ನಾಟಕದ ಪುತ್ರಿ. ನಿರಂಜನ್ ನಮ್ಮ ಕುಟುಂಬದ ಸದಸ್ಯರು. ಈ ಘಟನೆ ಬಗ್ಗೆ ಅತ್ಯಂತ ದುಃಖವಿದೆ. ನಾವೆಲ್ಲ ಅವರ ಜೊತೆ ಇರುತ್ತೇವೆ.‌ ಸಂಪೂರ್ಣ ನ್ಯಾಯ ಕೊಡಿಸುವುದು ಸರ್ಕಾರದ ಕರ್ತವ್ಯ” ಎಂದರು.

“ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. ತ್ವರಿತಗತಿಯಲ್ಲಿ ನ್ಯಾಯದಾನ ಆಗಬೇಕು. 90 ದಿನಗಳಲ್ಲಿ ನ್ಯಾಯದನ ಸಿಗಲಿದೆ ಅನ್ನೋ ವಿಶ್ವಾಸವಿದೆ.‌ ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು.‌ ಆಕೆಯ ಸಾವಿಗೆ ನ್ಯಾಯ ಸಿಗಬೇಕು. ವಿಶೇಷ ಕೋರ್ಟ್ ಖಂಡಿತಾ ತ್ವರಿತ ನ್ಯಾಯಾಲಯ ನೀಡಲಿದೆ” ಎಂದು ಅವರು ಹೇಳಿದರು.

.

LEAVE A REPLY

Please enter your comment!
Please enter your name here