
Suspected Terrorist Junaid's accomplice arrested in Bangalore
ಬೆಂಗಳೂರು:
ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-2 ಆರೋಪಿಯಾಗಿರುವ ಜುನೈದ್ ಸಹಚರನನ್ನು ಆರ್. ಟಿ.ನಗರ ಪೊಲೀಸರು ಬಂಧಿಸಿದ್ದಾರೆ.
ಜುನೈದ್ ಸಹಚರ ಮೊಹಮ್ಮದ್ ಅರ್ಷದ್ ಖಾನ್ ಬಂಧಿತ ಆರೋಪಿ. ಈ ಮೊಹಮ್ಮದ್ ಅರ್ಷದ್ ಖಾನ್ 2017 ರಲ್ಲಿ ನೂರ್ ಅಹಮ್ಮದ್ ಎಂಬಾತ ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಪ್ರಕರಣದ ಆರೋಪಿಯಾಗಿದ್ದು, ನಾಲ್ಕು ವರ್ಷದಿಂದ ತಲೆಮರೆಸಿಕೊಂಡಿದ್ದನು.
ಈ ವೇಳೆ ಮೊಹಮ್ಮದ್ ಅರ್ಷದ್ ಖಾನ್ ಅಪ್ರಾಪ್ತನಾಗಿದ್ದು, ಸಾಕಷ್ಟು ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದನು. ಈತನ ವಿರುದ್ಧ ಕೊಲೆ, ಕೊಲೆಯತ್ನ, ಕಳ್ಳತನ ಸೇರಿದಂತೆ 17 ಪ್ರಕರಣಗಳು ದಾಖಲಾಗಿವೆ.
ಮೊಹಮ್ಮದ್ ಅರ್ಷದ್ ಖಾನ್ ಬಂಧಿಸಲು ಆರ್.ಟಿ.ನಗರ ಪೊಲೀಸ್ ಠಾಣೆಯ ಪಿಎಸ್ಐ ವಿನೋದ್ ನಾಯಕ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿತ್ತು.