Home ಬೆಂಗಳೂರು ನಗರ Bengaluru: ಬೆಂಗಳೂರಿನಲ್ಲಿ ಶಂಕಿತ ಉಗ್ರ ಜುನೈದ್​​ ಸಹಚರನ ಬಂಧನ

Bengaluru: ಬೆಂಗಳೂರಿನಲ್ಲಿ ಶಂಕಿತ ಉಗ್ರ ಜುನೈದ್​​ ಸಹಚರನ ಬಂಧನ

38
0
Suspected Terrorist Junaid's accomplice arrested in Bangalore
Suspected Terrorist Junaid's accomplice arrested in Bangalore

ಬೆಂಗಳೂರು:

ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎ-2 ಆರೋಪಿಯಾಗಿರುವ ಜುನೈದ್ ​​ಸಹಚರನನ್ನು ಆರ್​. ಟಿ.ನಗರ ಪೊಲೀಸರು ಬಂಧಿಸಿದ್ದಾರೆ.

ಜುನೈದ್​​ ಸಹಚರ ಮೊಹಮ್ಮದ್ ಅರ್ಷದ್ ಖಾನ್ ಬಂಧಿತ ಆರೋಪಿ. ಈ ಮೊಹಮ್ಮದ್ ಅರ್ಷದ್ ಖಾನ್ 2017 ರಲ್ಲಿ ನೂರ್ ಅಹಮ್ಮದ್ ಎಂಬಾತ ಕಿಡ್ನಾಪ್ ಮಾಡಿ ಕೊಲೆ ಮಾಡಿರುವ ಪ್ರಕರಣದ ಆರೋಪಿಯಾಗಿದ್ದು, ನಾಲ್ಕು ವರ್ಷದಿಂದ ತಲೆಮರೆಸಿಕೊಂಡಿದ್ದನು.

ಈ ವೇಳೆ ಮೊಹಮ್ಮದ್ ಅರ್ಷದ್ ಖಾನ್ ಅಪ್ರಾಪ್ತನಾಗಿದ್ದು, ಸಾಕಷ್ಟು ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿದ್ದನು. ಈತನ ವಿರುದ್ಧ ಕೊಲೆ, ಕೊಲೆಯತ್ನ, ಕಳ್ಳತನ ಸೇರಿದಂತೆ 17 ಪ್ರಕರಣಗಳು ದಾಖಲಾಗಿವೆ.

ಮೊಹಮ್ಮದ್ ಅರ್ಷದ್ ಖಾನ್ ಬಂಧಿಸಲು ಆರ್.ಟಿ.ನಗರ ಪೊಲೀಸ್​ ಠಾಣೆಯ ಪಿಎಸ್ಐ ವಿನೋದ್ ನಾಯಕ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here