ಮೈಸೂರು:
ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ಶಿವನಾಗಮ್ಮ(90) ನಿಧನರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇಂದು ಮುಂಜಾನೆ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ.
ಶಿವನಾಗಮ್ಮ ನಿಧನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶೀ ಶ್ರೀಮತಿ ಶಿವನಾಗಮ್ಮನವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
— CM of Karnataka (@CMofKarnataka) June 14, 2021
ಮೃತರ ಆತ್ಮಕ್ಕೆ ಸದ್ಗತಿಯನ್ನು ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.