Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಬಗ್ಗೆ ಸ್ವಚ್ಛ ಭಾರತ್ ಮಿಷನ್ ನಿರ್ದೇಶಕರಿಂದ ವೀಕ್ಷಣೆ
  • ಬೆಂಗಳೂರು ನಗರ
  • ಕರ್ನಾಟಕ

ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಬಗ್ಗೆ ಸ್ವಚ್ಛ ಭಾರತ್ ಮಿಷನ್ ನಿರ್ದೇಶಕರಿಂದ ವೀಕ್ಷಣೆ

The Bengaluru Live April 11, 2025 5:35 PM 1 minute read
Swachh Bharat Mission Director’s observation on solid waste management in BBMP limits

ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಬಗ್ಗೆ ಸ್ವಚ್ಛ ಭಾರತ್ ಮಿಷನ್ ನಿರ್ದೇಶಕರಿಂದ ವೀಕ್ಷಣೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು, ಏ. 11: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸ್ವಚ್ಚ ಭಾರತ್ ಮಿಷನ್ (ನಗರ) [SBM(U)]-2.O ನಿರ್ದೇಶಕರಾದ ಶ್ರೀ ಬಿನಯ್ ಝಾ ರವರು ಇಂದು ಬಿ.ಎಸ್.ಡಬ್ಲ್ಯೂ.ಎಂ.ಎಲ್ ಕಛೇರಿಗೆ ಭೇಟಿ ನೀಡಿ ನಗರದಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತಂತೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ಹಣಾ ಅಧಿಕಾರಿಯಾದ ಡಾ. ಕೆ ಹರೀಶ್ ಕುಮಾರ್ ರವರು ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಯಾವ ರೀತಿ ಮಾಡಲಾಗುತ್ತಿದೆ, ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಮುಂದಿನ ದಿನಗಳಲ್ಲಿ ರೂಪಿಸಿರುವ ಯೋಜನೆಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ಸಮಗ್ರ ಮಾಹಿತಿಯನ್ನು ನೀಡಿದರು.

ನಗರದಲ್ಲಿ ಪ್ರಸ್ತುತ ಪ್ರತಿನಿತ್ಯ 6,500 ಮೆ.ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಪ್ರತಿ ಮನೆ-ಮನೆಗೆ ತೆರಳಿ ಆಟೋ ಟಿಪ್ಪರ್ ಗಳ ಮೂಲಕ ಹಸಿ, ಒಣ ಹಾಗೂ ನೈರ್ಮಲ್ಯ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತಿದೆ. ಕಸ ಸಂಗ್ರಹಿಸುವ ಆಟೋ ಟಿಪ್ಪರ್ ಹಾಗೂ ಕಾಂಪ್ಯಾಕ್ಟರ್ ಗಳಿಗೆ ಆರ್.ಎಫ್.ಐ.ಡಿ ಅಳವಡಿಸಿದ್ದು, ಮಾರ್ಷಲ್ ಗಳು ಪ್ರತಿನಿತ್ಯ ಮೊಬೈಲ್ ತಂತ್ರಾಂಶದ ಮೂಲಕ ಹಾಜರಾತಿ ಪಡೆಯಲಿದ್ದಾರೆ ಎಂದು‌ ಹೇಳಿದರು.

Swachh Bharat Mission Director’s observation on solid waste management in BBMP limits

ನಗರದಲ್ಲಿ ರಸ್ತೆ ಬದಿ ತ್ಯಾಜ್ಯ ಬಿಸಾಡುವವರ ಮೇಲೆ ಮಾರ್ಷಲ್ ಗಳು ದಂಡ ವಿಧಿಸಲಿದ್ದಾರೆ. ರಾತ್ರಿ ವೇಳೆ ಗಸ್ತು ತಿರುಗುವ ವೇಳೆ ರಸ್ತೆ ಬದಿ ಕಸ ಬಿಸಾಡುವವರನ್ನು ಹಿಡಿದು ದಂಡ ವಿಧಿಸಿ ಮತ್ತೆ ರಸ್ತೆ ಬದಿ ಕಸ ಬಿಸಾಡದಂತೆ ಎಚ್ಚರಿಕೆ ನೀಡಲಿದ್ದಾರೆ. ಅದಲ್ಲದೆ ಮನೆ-ಮನೆ ಕಸ ಸಂಗ್ರಹಿಸುವ ಆಟೋ ಟಿಪ್ಪರ್ ಗಳಿಗೆ ಕಸವನ್ನು ನೀಡಲು ಅರಿವು ಮೂಡಿಸುತ್ತಾರೆ ಎಂದು ತಿಳಿಸಿದರು.

ಇದಲ್ಲದೆ ಘನತ್ಯಾಜ್ಯ ನಿರ್ವಣೆಯ ಮೇಲ್ವಿಚಾರಣೆಗಾಗಿ ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್ ನಿರ್ಮಾಣ, ಕಸ ವಿಲೇವಾರಿಯ ಮೇಲ್ವಿಚಾರಣೆಗಾಗಿ ತಂತ್ರಾಂಶಗಳ ಅಭಿವೃದ್ಧಿಪಡಿಸುತ್ತಿರುವ ಬಗ್ಗೆಯೂ ಮಾಹಿತಿ ನೀಡಲಾಯಿತು.

Swachh Bharat Mission Director’s observation on solid waste management in BBMP limits

ಘನತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಭೇಟಿ: ಸ್ವಚ್ಛ ಭಾರತ ಅಭಿಯಾನದ ಧ್ಯೆಯೋದ್ದೆಶಗಳಲ್ಲೊಂದಾದ ಘನತ್ಯಾಜ್ಯದ ಸಮರ್ಪಕ ನಿರ್ವಹಣೆಯ ಕುರಿತು ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿಯನ್ನು ಪಡೆಯುವ ಸಲುವಾಗಿ ಭೂಭರ್ತಿ ಘಟಕಕ್ಕೆ ಮತ್ತು ಕೆ.ಸಿ.ಡಿ.ಸಿ ಸಂಸ್ಕರಣಾ ಘಟಕಗಳಿಗೆ ಭೇಟಿ ನೀಡಿದರು.

ಭೂಭರ್ತಿ ಘಟಕದಲ್ಲಿ ವೈಜ್ಞಾನಿಕವಾಗಿ ನಿರ್ವಹಿಸಲಾಗುತ್ತಿರುವ ಮಿಶ್ರ ತ್ಯಾಜ್ಯ ವಿಲೇವಾರಿಯನ್ನು ಗಮನಿಸಿ ಹಲವಾರು ಸಲಹೆಗಳನ್ನು ನೀಡಿದರು. ಭೂಭರ್ತಿ ಘಟಕದಲ್ಲಿ ವಿಲೇಗೊಳಿಸುತ್ತಿರುವ ಮಿಶ್ರ ತ್ಯಾಜ್ಯದ ಪ್ರಮಾಣವನ್ನು ಕುಂದಿಸಲು ಮೂಲದಲ್ಲಿಯೇ ತ್ಯಾಜ್ಯದ ವಿಂಗಡಣೆಯ ಪ್ರತಿಶತವನ್ನು ವೃದ್ಧಿಸಲು ಸಾರ್ವಜನಿಕರಿಗೆ ಫಲಿತಾಂಶ ಆಧಾರಿತ ಹೆಚ್ಚೆಚ್ಚು ಮಾಹಿತಿ, ಶಿಕ್ಷಣ ಮತ್ತು ಸಂವಹನ ಕೈಗೊಳ್ಳಲು ಸಲಹೆಯನ್ನು ನೀಡಿದರು.

ನಿರ್ಮಾಣ ಹಂತದ ಸಂಸ್ಕರಣ ಘಟಕಕ್ಕೆ ಭೇಟಿ: ಪೂರ್ಣ ಪ್ರಮಾಣದಲ್ಲಿ ಅಂದಾಜು ರೂ.150 ಕೋಟಿಗಳ ಖಾಸಗಿ ವೆಚ್ಚದಲ್ಲಿ ಮೆ. ಮುಕ್ಕಾ ಪ್ರೋಟಿನ್ಸ್ ಲಿಮಿಟೆಡ್ ವತಿಯಿಂದ ಅಂತರಾಷ್ಟ್ರೀಯ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಸಂಸ್ಕರಣ ಘಟಕಕ್ಕೆ ಭೇಟಿ ನೀಡಿ ತಂತ್ರಜ್ಞಾನದ ಹಾಗೂ ಕಾರ್ಯಾಚರಣೆಯ ಕುರಿತು ಮಾಹಿತಿಯನ್ನು ಪಡೆದರು.

ಸಂಸ್ಕರಣಾ ಘಟಕದಲ್ಲಿ ಅಂದಾಜು 1,000 ಮೆ.ಟನ್ ಸಾಮರ್ಥ್ಯದ ಸಂಸ್ಕರಣ ಘಟಕವೊಂದು ಬೆಂಗಳೂರು ನಗರಕ್ಕೆ ಅಗತ್ಯವಿರುವ ಕುರಿತು ವಿಶ್ಲೇಷಿಸಿ ನಗರಕ್ಕೆ ಕೊಡುಗೆಯನ್ನು ನೀಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಖಾಸಗಿ ಸಂಸ್ಥೆಯ ನಿರ್ಧಾರ ಮತ್ತು ಸಾಹಸಕ್ಕೆ ಹರ್ಷ ವ್ಯಕ್ತಪಡಿಸಿದರು. ಅಂತರಾಷ್ಟ್ರೀಯ ತಂತ್ರಜ್ಞಾನದೊಂದಿಗೆ ಬೃಹತ್ ಸಾಮರ್ಥ್ಯದ ಸಂಸ್ಕರಣ ಘಟಕ ನಿರ್ಮಿಸುತ್ತಿರುವ ಕುರಿತು ಪ್ರಸ್ತಾವನೆಯನ್ನು ಕ್ರಮಾನುಗತವಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಡಿಯ ಸ್ವಚ್ಛ ಭಾರತ ಅಭಿಯಾನದ ರಾಷ್ಟ್ರೀಯ ಉಸ್ತುವಾರಿ ಸಮಿತಿಗೆ ಸಲ್ಲಿಸಿದಲ್ಲಿ, ಸದರಿ ಮೆ. ಮುಕ್ಕಾ ಪ್ರೋಟಿನ್ಸ್ ಲಿಮಿಟೆಡ್ ನ ಭಾರಿ ಪ್ರಮಾಣದ ತಂತ್ರಜ್ಞಾನವನ್ನು ಅನುಮೋದಿಸಿ ರಾಜ್ಯ ಹಾಗೂ ದೇಶದ ಇತರೆ ಮಹಾನಗರ ಪಾಲಿಕೆಗಳಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಸೂಚಿಸಿ ಮಾರ್ಗಸೂಚಿಗಳನ್ನು ಹೊರಡಿಸಲಾಗವುದೆಂದು ಆಶ್ವಾಸನೆಯನ್ನು ನೀಡಿದರು. ಪ್ರಸ್ತಾವನೆಯನ್ನು ಸಲ್ಲಿಸಲು ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮುಖ್ಯ ಕಾರ್ಯಾಚರಣೆ ಅಧಿಕಾರಿಯಾದ ರಮಾಮಣಿ, ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಲೋಕೇಶ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: Union Minister Pralhad Joshi | ಕಾಂಗ್ರೆಸ್ಸಿನವರು ಹಿಂದೂ, ದಲಿತ ವಿರೋಧಿಗಳು- ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕೆ
Next: Nikhil Kumaraswamy | ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ; ಇದು ಏಳೂವರೆ ಕೋಟಿ ಕನ್ನಡಿಗರ ದನಿ ಎಂದ ನಿಖಿಲ್ ಕುಮಾರಸ್ವಾಮಿ

Related Stories

parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

The Bengaluru Live November 12, 2026 7:10 PM
tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

The Bengaluru Live November 12, 2026 7:07 PM

Latest Post

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM
ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

November 12, 2026 7:04 PM
ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ ಓಕಳಿಪುರಂ ಎಂಟು ಪಥದ ಕಾರಿಡಾರ್ ಬಳಿ ರಾತ್ರಿ ಡಾಂಬರೀಕರಣ ಕಾಮಗಾರಿಯಲ್ಲಿ ರಸ್ತೆ ರೋಲರ್
  • ಬೆಂಗಳೂರು

ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ

November 12, 2026 3:58 PM
ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಕೃಷ್ಣ ಬೈರೇಗೌಡ ಮತ್ತು ಅಧಿಕಾರಿಗಳು
  • ಬೆಂಗಳೂರು

ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ

November 12, 2026 3:50 PM

ನೀವು ತಪ್ಪಿಸಿಕೊಂಡಿರಬಹುದು

parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

The Bengaluru Live November 12, 2026 7:10 PM
tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

The Bengaluru Live November 12, 2026 7:07 PM
bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

The Bengaluru Live November 12, 2026 7:04 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
  • ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್
  • ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ
  • ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ
©Copyright 2025 The Bengaluru Live All rights reserved. | MoreNews by AF themes.