ಪ್ರಧಾನಿ ನರೇಂದ್ರ ಮೋದಿಜೀ ಅವರ “ಸ್ವಚ್ಚ ಭಾರತ” ಕಲ್ಪನೆ ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳ ಒತ್ತಾಸೆಯಂತೆ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳನ್ನ ಶೂನ್ಯ ತ್ಯಾಜ್ಯ ಆವರಣವನ್ನಾಗಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆಯಾಗಿ “ಸ್ವಚ್ಚ ಮಂದಿರ ಅಭಿಯಾನ”ಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಹೇಳಿದರು.