Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ರಾಜಕೀಯ
  • Teach a lesson for those who want to change the constitution : CM Siddaramaiah appeals| ಸಂವಿಧಾನ ವಿರೋಧಿಗಳಿಗೆ-ಸಂವಿಧಾನ ಬದಲಾಯಿಸುತ್ತೇವೆ ಎನ್ನುವವರಿಗೆ ತಕ್ಕ ಪಾಠ ಕಲಿಸಿ: ಸಿ.ಎಂ ಸಿದ್ದರಾಮಯ್ಯ ಕರೆ
  • ರಾಜಕೀಯ
  • ಚಿತ್ರದುರ್ಗ

Teach a lesson for those who want to change the constitution : CM Siddaramaiah appeals| ಸಂವಿಧಾನ ವಿರೋಧಿಗಳಿಗೆ-ಸಂವಿಧಾನ ಬದಲಾಯಿಸುತ್ತೇವೆ ಎನ್ನುವವರಿಗೆ ತಕ್ಕ ಪಾಠ ಕಲಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

The Bengaluru Live January 28, 2024 6:16 PM 1 minute read
Teach a lesson for those who want to change the constitution : CM Siddaramaiah appeals

Teach a lesson for those who want to change the constitution : CM Siddaramaiah appeals| ಸಂವಿಧಾನ ವಿರೋಧಿಗಳಿಗೆ-ಸಂವಿಧಾನ ಬದಲಾಯಿಸುತ್ತೇವೆ ಎನ್ನುವವರಿಗೆ ತಕ್ಕ ಪಾಠ ಕಲಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸಿ ಸಂವಿಧಾನ ವಿರೋಧಿಸುವ BJP-RSS ಅನ್ನು ತಿರಸ್ಕರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಸಂವಿಧಾನವನ್ನು ನಾವು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ: ಸಿ.ಎಂ ಸಿದ್ದರಾಮಯ್ಯ

ಚಿತ್ರದುರ್ಗ:

ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ “ಶೋಷಿತರ ಜಾಗೃತಿ ಸಮಾವೇಶವನ್ನು” ಉದ್ಘಾಟಿಸಿ ಮಾತನಾಡಿದರು.

ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಿ ಎಂದು ಸೂಚಿಸಿದರು.

ಮಂಡಲ್ ವರದಿಯನ್ನು ಬಿಜೆಪಿ ಮತ್ತು RSS ವಿರೋಧಿಸುತ್ತಲೇ ಬಂದಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು BJP-RSS ನಿರಂತರವಾಗಿ ವಿರೋಧಿಸುತ್ತಲೇ ಇದೆ. ಆದ್ದರಿಂದ ಸಂವಿಧಾನ ಮತ್ತು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು. ಈ ಎಚ್ಚರಿಕೆಯನ್ನು ನಾವು ಮರೆಯಬಾರದು ಎಂದರು.

ಬಾಬಾ ಸಾಹೇಬ್ ಅವರ ಸಂವಿಧಾನ ಇಲ್ಲದೇ ಹೋಗಿದ್ದರೆ ಕೆ.ಎಸ್.ಈಶ್ವರಪ್ಪ ಸಿ.ಟಿ.ರವಿ ಮತ್ತು ಆರ್.ಅಶೋಕ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸಲು ಸಾಧ್ಯವೇ ಇರಲಿಲ್ಲ. ಯಾರದ್ದೋ ಹೊಲ ಗದ್ದೆಗಳಲ್ಲಿ ಕೂಲಿ ಮಾಡುತ್ತಾ ಕೂರಬೇಕಾಗಿತ್ತು ಎಂದು ಮುಖ್ಯಮಂತ್ರಿಗಳು ಟೀಕಿಸಿದರು.

ಮುಖ್ಯಮಂತ್ರಿ @siddaramaiah ಅವರು ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ "ಶೋಷಿತರ ಜಾಗೃತಿ ಸಮಾವೇಶವನ್ನು" ಉದ್ಘಾಟಿಸಿದರು.

ಸಮಾವೇಶದಲ್ಲಿ ಉಪಮುಖ್ಯಮಂತ್ರಿ @DKShivakumar, ಸಚಿವರುಗಳಾದ @CMahadevappa, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್… pic.twitter.com/c22RohLBSJ

— CM of Karnataka (@CMofKarnataka) January 28, 2024

ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಮಧ್ಯಮ ವರ್ಗ ಮತ್ತು ಬಡವರಿಗೆ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದ್ದಕ್ಕೆ ನನ್ನನ್ನು ವಿರೋಧಿಸುತ್ತಿದ್ದಾರೆ.

ಅನ್ನ ಭಾಗ್ಯ, ಶೂ ಭಾಗ್ಯ, ಸಮವಸ್ತ್ರ ಭಾಗ್ಯ ಸೇರಿ ಸಾಲು ಸಾಲು ಅನುಕೂಲಗಳನ್ನು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಕಲ್ಪಿಸಿದೆ. ಇದಕ್ಕೇ ನನ್ನನ್ನು ವಿರೋಧಿಸುತ್ತಾರೆ. ಆದರೆ ನಾನು ಎದೆ ಗುಂದದೆ ನಿಮ್ಮ ಪರವಾಗಿ ಇರುತ್ತೇನೆ ಎಂದರು.

ಜಾತಿ ತಾರತಮ್ಯ, ಜಾತಿ ಶೋಷಣೆ, ಜಾತಿ ಆಧಾರಿತ ಅಸಮಾನತೆ ಜಾರಿಯಲ್ಲಿ ಇರುವವರೆಗೆ ಇಂಥಾ ಸಮಾವೇಶಗಳು ಅಗತ್ಯ ಮತ್ತು ಅನಿವಾರ್ಯ ಎಂದು ವಿವರಿಸಿದರು.

ಸಂಘಟನೆಗಳ ಮೂಲಕ ಜಗೃತಿ ಪಡೆದುಕೊಂಡರೆ ಮಾತ್ರ ಜಾತಿ ವ್ಯವಸ್ಥೆ ನಾಶವಾಗುತ್ತದೆ ಎನ್ನುವ ಎಚ್ಚರವನ್ನು ಅಂಬೇಡ್ಕರ್ ಮುಂತಾದ ಮಹನೀಯರು ನೀಡಿದ್ದಾರೆ. ಕುಲ ಕುಲ ಎಂದು ಬಡಿದಾಡದಿರಿ ಎಂದು ಕರೆ ನೀಡಿದ ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಿ ಅವಮಾನಿಸಬೇಡಿ ಎಂದರು.

ಜಾತಿ ವ್ಯವಸ್ಥೆ ಕಾರಣಕ್ಕೆ ಶತ ಶತಮಾನಗಳಿಂದ ತಳ ಸಮುದಾಯಗಳ ಜನ ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಪರಿಣಾಮ ಸಮಾಜದಲ್ಲಿ ಅಸಮಾನತೆ ಸೃಷ್ಟಿ ಆಯಿತು‌. ಸಾಮಾಜಿಕ, ಆರ್ಥಿಕ ಅಸಮಾನತೆಗೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ತಾರತಮ್ಯದಿಂದಲೇ ದೇಶದಲ್ಲು ಶೋಷಣೆ ಮುಂದುವರೆದಿದೆ.

ಈ ಜಾತಿ ಶೋಷಣೆಗೆ ಕೊನೆ ಹಾಡುವ ಉದ್ದೇಶದಿಂದಲೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ನೀಡಿದರು. ಸಾಹಿ ಮಹಾರಾಜ್, ಜ್ಯೋತಿಬಾ ಫುಲೆ, ಬುದ್ದ, ಬಸವಣ್ಣ, ನಾರಾಯಣಗುರು, ನಾಲ್ವಡಿ ಅರಸರು, ವಿವೇಕಾನಂದ, ಕನಕದಾಸರೆಲ್ಲರೂ ಈ ಜಾತಿ ವ್ಯವಸ್ಥೆ ತೊಡೆದು ಹಾಕಲು ಶ್ರಮಿಸಿದರು. ನಮ್ಮ ಸಂವಿಧಾನ ಕೂಡ ಈ ಎಲ್ಲಾ ಮಹನೀಯರ ಆಶಯಗಳನ್ನು ಒಳಗೊಂಡಿದೆ ಎಂದರು.

ಈ ಕಾರಣಕ್ಕೇ ಪಟ್ಟ ಭದ್ರ ಹೊತಾಸಕ್ತಿಗಳು, ದುಷ್ಟ ಶಕ್ತಿಗಳು ಸಂವಿಧಾನ ಬದಲಾಯಿಸುವ ಮೂಲಕ ಮತ್ತೆ ಶೋಷಣೆ, ಮೌಡ್ಯದ ದರ್ಬಾರ್ ಮುಂದುವರೆಸಲು ಯತ್ನಿಸುತ್ತಿದ್ದಾರೆ. ಒಂದು ಕಡೆ ಸಂವಿಧಾನ ಬದಲಾಯಿಸಲು ಹುನ್ನಾರ ನಡೆಸುತ್ತಿದ್ದಾರೆ ಮತ್ತೊಂದು ಕಡೆ ನಾಲ್ವಡಿ ಅರಸು ಮತ್ತು ಅಂಬೇಡ್ಕರ್, ಸಾಹು ಮಹಾರಾಜ್ ಪ್ರತಿಪಾದಿಸಿದ ಮೀಸಲಾತಿಯನ್ನೂ ವಿರೋಧಿಸುತ್ತಿದ್ದಾರೆ. ಆದ್ದರಿಂದ ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಕರೆ ನೀಡಿದರು.

ಭಾಷಣದ ಇತರೆ ಹೈಲೈಟ್ಸ್

ಕಾಂತರಾಜ್ ಅವರ ವರದಿಯನ್ನು ಕೆಲವರು ಓದದೆ, ತಿಳಿಯದೆ ವಿರೋಧಿಸುತ್ತಿದ್ದಾರೆ. ನಾವು ಕಾಂತರಾಜ ವರದಿಯನ್ನು ಖಂಡಿತಾ ಸ್ವೀಕರಿಸುತ್ತೇವೆ

ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡಿ ದೇಶದಲ್ಲಿ ಜಾತಿ ಗಣತಿ ಮಾಡಿಸುತ್ತೇವೆ ಎಂದು ರಾಹುಲ್ ಗಾಂಧಿ ಘೋಷಿಸಿದ್ದಾರೆ

ಸಮಾವೇಷದಲ್ಲಿ ಶೋಷಿತ ಸಮುದಾಯಗಳ ಹಕ್ಕೊತ್ತಾಯಗಳ ಬೇಡಿಕೆಗಳನ್ನು ಒಕ್ಕೂಟದ ಪದಾಧಿಕಾರಿಗಳು ಮಂಡಿಸಿದರು.‌

ಸಮಾವೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಬೋಸ್ ರಾಜು, ಕೆ.ಎಚ್.ಮುನಿಯಪ್ಪ, ಬೈರತಿ ಸುರೇಶ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಜಮೀರ್ ಅಹಮದ್ , ದಿನೇಶ್ ಗುಂಡೂರಾವ್, ಆರ್. ಬಿ.ತಿಮ್ಮಾಪುರ್, ನಾಗೇಂದ್ರ, ಡಿ.ಸುಧಾಕರ್, ಶಿವರಾಜ್ ತಂಗಡಗಿ, ರಹೀಂಖಾನ್ ಮುಂತಾದವರು ಮಾತನಾಡಿ ದೇಶದಲ್ಲಿ ಶೋಷಿತ ಸಮುದಾಯಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆ ತಕ್ಕ ಪಾಠ ಕಲಿಸುವಂತೆ ಕರೆ ನೀಡಿದರು.

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಾವಳ್ಳಿ ಶಂಕರ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಎಚ್.ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಹಾಗೂ ಶಾಸಕರುಗಳಾದ ಪ್ರಕಾಶ್ ರಾಥೋಡ್, ನಾಗರಾಜ್ ಯಾದವ್, ಅಜಯ್ ಸಿಂಗ್, ನಸೀರ್ ಅಹಮದ್ ಸೇರಿ 20 ಕ್ಕೂ ಹೆಚ್ಚು ಶಾಸಕರುಗಳು ಉಪಸ್ಥಿತರಿದ್ದು ಮಾತನಾಡಿದರು.

About the Author

The Bengaluru Live

Administrator

Visit Website View All Posts

Post navigation

Previous: Horrific scene caught on CCTV in Bengaluru — Cruelty when a car drove over a sleeping dog| ಬೆಂಗಳೂರಿನಲ್ಲಿ CCTVಯಲ್ಲಿ ಭಯಾನಕ ದೃಶ್ಯ ಸೆರೆ — ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ಕ್ರೌರ್ಯ
Next: Linking of Aadhaar and Pahani should be done in a ‘fruits’ model: Krishna Byregowda| ‘ಫ್ರೂಟ್ಸ್’ ಮಾದರಿಯಲ್ಲೇ ಆಧಾರ್ ಮತ್ತು ಪಹಣಿ ಲಿಂಕ್ ಮಾಡುವ ಕೆಲಸ ಆಂದೋಲನದ ಮಾದರಿಯಲ್ಲಿ ಆಗಬೇಕು: ಕೃಷ್ಣ ಬೈರೇಗೌಡ

Related Stories

ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

The Bengaluru Live November 10, 2026 5:03 PM
ಕರ್ನಾಟಕ ಸರ್ಕಾರದ ಲಾಂಛನ ಮತ್ತು ರಾಷ್ಟ್ರಧ್ವಜವಿರುವ ಸಭಾಂಗಣದಲ್ಲಿ ಸಭೆಯ ಮೇಜಿನ ಸುತ್ತ ಕುಳಿತಿರುವ ಸಚಿವರು ಮತ್ತು ಅಧಿಕಾರಿಗಳು
  • ಕರ್ನಾಟಕ
  • ರಾಜಕೀಯ

ಸಂವಿಧಾನ ದಿನಾಚರಣೆ ಸಾಮಾಜಿಕ ನ್ಯಾಯದ ಸಂದೇಶವನ್ನು ಎಲ್ಲ ವರ್ಗಗಳಿಗೆ ತಲುಪಿಸಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

The Bengaluru Live November 10, 2026 4:34 PM
ಕಚೇರಿಯ ಉದ್ದನೆಯ ಮೇಜಿನ ಬಳಿ ಒಬ್ಬರು ನಿಂತು, ಇನ್ನೊಬ್ಬರು ಕುಳಿತು ದೂರವಾಣಿ ಕರೆ ಸ್ವೀಕರಿಸುತ್ತಿರುವ ಇಬ್ಬರು, ಮೇಜಿನ ಮೇಲೆ ನೋಟ್‌ಬುಕ್ ಮತ್ತು ಲ್ಯಾಂಡ್‌ಲೈನ್ ಫೋನ್
  • ಕರ್ನಾಟಕ
  • ರಾಜಕೀಯ

ಘನತ್ಯಾಜ್ಯ ನಿರ್ವಹಣೆಯ ಐದನೇ ಫೋನ್-ಇನ್: ಬೆಂಗಳೂರು ಉತ್ತರ ನಗರ ಪಾಲಿಕೆಗೆ 12 ಕರೆ, 8 ಅಹವಾಲು ದಾಖಲು

The Bengaluru Live November 10, 2026 4:11 PM

Latest Post

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

November 10, 2026 10:14 PM
ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

November 10, 2026 5:55 PM
ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

November 10, 2026 5:03 PM
ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಹೂವಿನ ಹಾರ ಹಾಕಿದ ನೀಲಿ-ಬೆಳ್ಳಿ ಬಣ್ಣದ ಮೆಟ್ರೋ ರೈಲಿನ ಪಕ್ಕ ಸುರಕ್ಷತಾ ಕವಚ, ಹೆಲ್ಮೆಟ್ ಧರಿಸಿ ನಿಂತಿರುವ ಯೋಜನಾ ಸಿಬ್ಬಂದಿ
  • ಬೆಂಗಳೂರು

ಬ್ಲೂ ಲೈನ್ ಮೆಟ್ರೋ ಪ್ರಾಯೋಗಿಕ ಸಂಚಾರ ಬೈಯಪ್ಪನಹಳ್ಳಿಯಿಂದ ಕೆ.ಆರ್. ಪುರ, ದೊಡ್ಡನೆಕ್ಕುಂದಿಯತ್ತ ಮುಂದುವರಿದಿದೆ: ಕೃಷ್ಣ ಬೈರೇಗೌಡ

November 10, 2026 4:52 PM
ಕರ್ನಾಟಕ ಹವಾಮಾನ: ನವೆಂಬರ್ 14ರವರೆಗೆ ಒಣ ಹವೆ; ನವೆಂಬರ್ 15-16ರಂದು ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಗ್ರಾಮೀಣ ಪ್ರದೇಶದ ಮೇಲೆ ಮೋಡ ಕವಿದ ಆಕಾಶದ AI ಸೃಷ್ಟಿಸಿದ ಪ್ರಾತಿನಿಧಿಕ ಚಿತ್ರ
  • ಕರ್ನಾಟಕ
  • ಬೆಂಗಳೂರು

ಕರ್ನಾಟಕ ಹವಾಮಾನ: ನವೆಂಬರ್ 14ರವರೆಗೆ ಒಣ ಹವೆ; ನವೆಂಬರ್ 15-16ರಂದು ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ

November 10, 2026 4:38 PM

ನೀವು ತಪ್ಪಿಸಿಕೊಂಡಿರಬಹುದು

ವಿಧಾನಸೌಧದಲ್ಲಿ ಮಧ್ಯಂತರ ಬರ ಪರಿಹಾರ ಪಾವತಿಗೆ ಚಾಲನೆ ನೀಡಿದ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ

The Bengaluru Live November 10, 2026 11:27 PM
ಡಾ. ಸಮೀಕ್ಷಾ ರೆಡ್ಡಿ ಅವರ ಭಾವಚಿತ್ರ ಮತ್ತು ಬನ್ನೇರುಘಟ್ಟದಲ್ಲಿ ನೀರಾನೆ ಮರಿಯ ಸಮೀಕ್ಷಾ ನಾಮಫಲಕದ ಬಳಿಯ ಸಂದರ್ಶಕರು
  • ಕರ್ನಾಟಕ
  • ಬೆಂಗಳೂರು ನಗರ

ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು

The Bengaluru Live November 10, 2026 10:14 PM
ಪರಿಶೀಲನೆಯ ವೇಳೆ ಜೈವಿಕ ಅನಿಲ ಘಟಕದಲ್ಲಿ ಹಸಿರು ಚೌಕಟ್ಟಿನ ಗ್ಯಾಸ್ ಸಿಲಿಂಡರ್‌ಗಳ ಸುತ್ತ ನಿಂತಿರುವ ಪುರುಷರು
  • ಬೆಂಗಳೂರು

ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ

The Bengaluru Live November 10, 2026 5:55 PM
ಸಿಡಬ್ಲ್ಯುಪಿ ಬ್ಯಾನರ್ ಮತ್ತು ಕರ್ನಾಟಕ ಲಾಂಛನದ ಮುಂದೆ ಮೈಕ್ರೋಫೋನ್‌ಗಳಿರುವ ಮೇಜಿನ ಹಿಂದೆ ನಿಂತಿರುವ ಎಂಟು ಮಂದಿ, ಅವರಲ್ಲಿ ಇಬ್ಬರು ಕಾಗದ ಹಿಡಿದಿದ್ದಾರೆ
  • ಕರ್ನಾಟಕ
  • ರಾಜಕೀಯ

ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ

The Bengaluru Live November 10, 2026 5:03 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕರ್ನಾಟಕ ಬರ ಪರಿಹಾರ: ₹5,000 ಪಾವತಿ ಕುರಿತು ಶಿವಕುಮಾರ್ ಸ್ಪಷ್ಟನೆ, ಮೊದಲ ಕಂತಿನ ಮೊತ್ತದ ಬಗ್ಗೆ ಅಶೋಕ ಪ್ರಶ್ನೆ
  • ಡಾ. ಸಮೀಕ್ಷಾ ರೆಡ್ಡಿ ಯಾರು? ಬನ್ನೇರುಘಟ್ಟದಲ್ಲಿ ಅವರ ಸ್ಮರಣೆಗೆ ರಾಮಲಿಂಗಾ ರೆಡ್ಡಿ ಶಿಫಾರಸು
  • ನ.13ರಂದು ಬೆಂಗಳೂರಿನಲ್ಲಿ ₹160 ಕೋಟಿ ವೆಚ್ಚದ ಸಂಕುಚಿತ ಜೈವಿಕ ಅನಿಲ ಘಟಕಕ್ಕೆ ಪ್ರಧಾನಿ ಮೋದಿ ವರ್ಚುವಲ್ ಶಿಲಾನ್ಯಾಸ
  • ನ.17-18ರಂದು ಬೆಂಗಳೂರಿನಲ್ಲಿ ದೇಶದ ಮೊದಲ ಸಿಡಬ್ಲ್ಯುಪಿ ಭಾರತ ಪ್ರಾದೇಶಿಕ ಸಮ್ಮೇಳನ; ಓಂ ಬಿರ್ಲಾ, ಡಿ.ಕೆ. ಶಿವಕುಮಾರ್ ಉದ್ಘಾಟನೆ
©Copyright 2025 The Bengaluru Live All rights reserved. | MoreNews by AF themes.