Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸದ್ಯದಲ್ಲೇ‌ ಪ್ರಾರಂಭ- ಸುರೇಶ್ ಕುಮಾರ್
  • ಶಿಕ್ಷಣ
  • ಬೆಂಗಳೂರು ನಗರ

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸದ್ಯದಲ್ಲೇ‌ ಪ್ರಾರಂಭ- ಸುರೇಶ್ ಕುಮಾರ್

The Bengaluru Live April 30, 2021 12:20 PM 1 minute read
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸದ್ಯದಲ್ಲೇ‌ ಪ್ರಾರಂಭ- ಸುರೇಶ್ ಕುಮಾರ್

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸದ್ಯದಲ್ಲೇ‌ ಪ್ರಾರಂಭ- ಸುರೇಶ್ ಕುಮಾರ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಅತಿ ಶೀಘ್ರದಲ್ಲೇ ಪ್ರಾರಂಭಿಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕರ್ನಾಟಕ‌ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ‌ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರುವ ಸಚಿವ ಸಂಪುಟದ ನಿರ್ಣಯವನ್ನು ರಾಜ್ಯಪಾಲರು ಅನುಮೋದಿಸಿದ್ದು, ಈ ಕುರಿತಂತೆ ಅಧ್ಯಾದೇಶವನ್ನು ಅಧಿಕೃತ ರಾಜ್ಯಪತ್ರದ ಮೂಲಕ ಪ್ರಕಟಿಸಲು ಕ್ರಮ ವಹಿಸಲಾಗಿದೆ.

2019-20ನೇ ಸಾಲಿನಲ್ಲಿ ಕಡ್ಡಾಯ-ಹೆಚ್ಚುವರಿ ವರ್ಗಾವಣೆಗೊಳಗಾದ ಶಿಕ್ಷಕರಿಗೆ ಒಂದು ಬಾರಿ ವಿಶೇಷ ಅವಕಾಶ ಜಾರಿಯಲ್ಲಿಡಬೇಕು,ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ತಾಲ್ಲೂಕು/ಜಿಲ್ಲೆಯಲ್ಲಿ ಲಭ್ಯವಿರುವ ಹುದ್ದೆಗಳಿಗೆ ಮೊದಲ ಆದ್ಯತೆಯ ವರ್ಗಾವಣೆ ಅವಕಾಶವನ್ನು ನೀಡಲು ಸುಗ್ರೀವಾಜ್ಞೆಯಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

  • Screenshot 188
  • Screenshot 189

ಶಿಕ್ಷಕ ಮಿತ್ರ : ವರ್ಗಾವಣೆ ಕೋರಿ ಸಲ್ಲಿಕೆಯಾಗಿರುವ ಸುಮಾರು ಎಪ್ಪತ್ತೆರಡು ಸಾವಿರ ಅರ್ಜಿಗಳನ್ನು ಶಿಕ್ಷಕ ಮಿತ್ರ ಆಪ್ ಮೂಲಕವೇ ನಿರ್ವಹಿಸಿ ಕೌನ್ಸೆಲಿಂಗ್  ಪ್ರಕ್ರಿಯೆಯನ್ನು ಸಂಪೂರ್ಣ ಅನ್ ಲೈನ್ ಮೂಲಕವೇ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಶಿಕ್ಷಕರು ಭೌತಿಕವಾಗಿ‌ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ‌ ಪಾಲ್ಗೊಳ್ಳಬಾರದು, ವ್ಯವಸ್ಥೆ ಅತ್ಯಂತ ಪಾರದರ್ಶಕವಾಗಿರಬೇಕು, ಯಾವುದೇ ದೂರು ದುಮ್ಮಾನಗಳನ್ನು‌ ಸಮರ್ಪಕವಾಗಿ ನಿರ್ವಹಿಸುವ ಸದೃಢ ವ್ಯವಸ್ಥೆ ಜಾರಿಯಲ್ಲಿಡಬೇಕು ಹಾಗೂ ಇಡೀ ಪ್ರಕ್ರಿಯೆ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ಮನವಿ: ಕಡ್ಡಾಯ-ಹೆಚ್ಚುವರಿ ವರ್ಗಾವಣೆಯಿಂದ ಸುಮಾರು‌ ಮೂರೂವರೆ ಸಾವಿರ ಶಿಕ್ಷಕರು ತೀವ್ರ ಸಂಕಷ್ಟಕ್ಕೊಳಗಾಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಅವರಿಗೆ ಅವಕಾಶ ಕಲ್ಪಿಸಬೇಕಾಗಿರುವುದು ಸರ್ಕಾರದ ಜವಾಬ್ದಾರಿಯಾಗಿದೆ. ನ್ಯಾಯಾಲಯದ ಆಜ್ಞೆಯನ್ನು ಅನುಸರಿಸುವ, ಸಂಕಷ್ಟದಲ್ಲಿರುವ ಶಿಕ್ಷಕರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಅತಿ ಶೀಘ್ರ ಅವಧಿಯಲ್ಲಿ ಸುಗ್ರೀವಾಜ್ಞೆಯನ್ನು ಹೊರತರಲು ಕ್ರಮ ವಹಿಸಲಾಗಿದ್ದು, ಸರ್ಕಾರದ‌ ಈ ಕಾಳಜಿಯನ್ನು ಅರ್ಥೈಸಿಕೊಂಡು ಶಿಕ್ಷಕ‌ ಸಮುದಾಯ ಅತ್ಯಂತ ಶಿಕ್ಷಕ ಸ್ನೇಹಿಯಾದ ವರ್ಗಾವಣಾ‌ ಪ್ರಕ್ರಿಯೆಯನ್ನು ಅಡೆತಡೆಗಳಿಲ್ಲದೇ‌ ಪೂರ್ಣಗೊಳಿಸಲು ಎಲ್ಲ ಸಹಕಾರ‌ ನೀಡಬೇಕು. ಶಿಕ್ಷಕ ಸಂಘಟನೆಗಳು‌ ಕ್ರಿಯಾಶೀಲವಾಗಿ ಕೆಲಸ ಮಾಡಿ ಸರ್ಕಾರದ ನಿಲುವನ್ನು ಎಲ್ಲ ಶಿಕ್ಷಕರಿಗೆ ಅರ್ಥೈಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

About the Author

The Bengaluru Live

Administrator

Visit Website View All Posts

Post navigation

Previous: ಶೇ 5ರಷ್ಟು ರಿಯಾಯಿತಿ ಜೊತೆ ಮೇ 31ರ ತನಕ ಆಸ್ತಿ ತೆರಿಗೆ ಪಾವತಿಸಿ
Next: Covid-19 Vaccination: ಕರ್ನಾಟಕದಲ್ಲಿ 18-44 ವರ್ಷ ವಯೋಮಾನದವರಿಗೆ ನಾಳೆ ಲಸಿಕೆ ಇಲ್ಲ

Related Stories

ಕರ್ನಾಟಕ ಸರ್ಕಾರದ ಲಾಂಛನವಿರುವ ಮರದ ಹೊದಿಕೆಯ ಸಭಾಂಗಣದಲ್ಲಿ ಉದ್ದನೆಯ ಮೇಜುಗಳ ಬಳಿ ಕುಳಿತಿರುವ ಸಮವಸ್ತ್ರಧಾರಿ ಹಿರಿಯ ಪೊಲೀಸ್ ಅಧಿಕಾರಿಗಳು
  • ಬೆಂಗಳೂರು ನಗರ

ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ: ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ಕೇಂದ್ರಗಳಾಗಬಾರದು ಎಂದು ಬೆಂಗಳೂರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಶಿವಕುಮಾರ್ ಎಚ್ಚರಿಕೆ

The Bengaluru Live November 20, 2026 10:24 PM
ಸಭಾಂಗಣದಲ್ಲಿ ಉದ್ದನೆಯ ಮೇಜುಗಳ ಸುತ್ತ ಕುಳಿತಿರುವ ಅಧಿಕಾರಿಗಳು, ನಗರ ಯೋಜನಾ ಸಲಹೆಗಾರರು ಮತ್ತು ನಾಗರಿಕ ಸಂಸ್ಥೆಗಳ ಪ್ರತಿನಿಧಿಗಳು
  • ಬೆಂಗಳೂರು ನಗರ

‘ಬಜೆಟ್ ಟು ಆಕ್ಷನ್’ ಯೋಜನೆಗಳ ಪ್ರಗತಿ ಪರಿಶೀಲನೆ: ಜಿಬಿಎ ಕ್ರಿಯಾ ಯೋಜನೆಯ 518 ಹಾಗೂ ತಜ್ಞರು ಪಟ್ಟಿ ಮಾಡಿದ 118 ಯೋಜನೆಗಳ ಪರಿಶೀಲಿಸಿದ ಬೆಂಗಳೂರು ಉತ್ತರ ನಗರ ಪಾಲಿಕೆ

The Bengaluru Live November 20, 2026 9:35 PM
ಹಿಂದೆ ಗಾಂಧೀಜಿ ಮತ್ತು ಅಂಬೇಡ್ಕರ್ ಭಾವಚಿತ್ರಗಳು ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಲಾಂಛನವಿರುವ ಕಚೇರಿಯಲ್ಲಿ ಇ-ಸ್ಟ್ಯಾಂಪ್ ಒಪ್ಪಂದ ಪತ್ರಗಳನ್ನು ಹಿಡಿದು ನಿಂತಿರುವ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ
  • ಬೆಂಗಳೂರು ನಗರ

ಘನತ್ಯಾಜ್ಯ ನಿರ್ವಹಣೆ ಬಲಪಡಿಸಲು ಸಹಾಸ್ ಜೊತೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಒಪ್ಪಂದ, ಉಚಿತ ತಾಂತ್ರಿಕ ಸಲಹೆ: ಆಯುಕ್ತ ಕೆ.ಎನ್. ರಮೇಶ್

The Bengaluru Live November 20, 2026 8:14 PM

Latest Post

ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ: ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ಕೇಂದ್ರಗಳಾಗಬಾರದು ಎಂದು ಬೆಂಗಳೂರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಶಿವಕುಮಾರ್ ಎಚ್ಚರಿಕೆ ಕರ್ನಾಟಕ ಸರ್ಕಾರದ ಲಾಂಛನವಿರುವ ಮರದ ಹೊದಿಕೆಯ ಸಭಾಂಗಣದಲ್ಲಿ ಉದ್ದನೆಯ ಮೇಜುಗಳ ಬಳಿ ಕುಳಿತಿರುವ ಸಮವಸ್ತ್ರಧಾರಿ ಹಿರಿಯ ಪೊಲೀಸ್ ಅಧಿಕಾರಿಗಳು
  • ಬೆಂಗಳೂರು ನಗರ

ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ: ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ಕೇಂದ್ರಗಳಾಗಬಾರದು ಎಂದು ಬೆಂಗಳೂರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಶಿವಕುಮಾರ್ ಎಚ್ಚರಿಕೆ

November 20, 2026 10:24 PM
‘ಬಜೆಟ್ ಟು ಆಕ್ಷನ್’ ಯೋಜನೆಗಳ ಪ್ರಗತಿ ಪರಿಶೀಲನೆ: ಜಿಬಿಎ ಕ್ರಿಯಾ ಯೋಜನೆಯ 518 ಹಾಗೂ ತಜ್ಞರು ಪಟ್ಟಿ ಮಾಡಿದ 118 ಯೋಜನೆಗಳ ಪರಿಶೀಲಿಸಿದ ಬೆಂಗಳೂರು ಉತ್ತರ ನಗರ ಪಾಲಿಕೆ ಸಭಾಂಗಣದಲ್ಲಿ ಉದ್ದನೆಯ ಮೇಜುಗಳ ಸುತ್ತ ಕುಳಿತಿರುವ ಅಧಿಕಾರಿಗಳು, ನಗರ ಯೋಜನಾ ಸಲಹೆಗಾರರು ಮತ್ತು ನಾಗರಿಕ ಸಂಸ್ಥೆಗಳ ಪ್ರತಿನಿಧಿಗಳು
  • ಬೆಂಗಳೂರು ನಗರ

‘ಬಜೆಟ್ ಟು ಆಕ್ಷನ್’ ಯೋಜನೆಗಳ ಪ್ರಗತಿ ಪರಿಶೀಲನೆ: ಜಿಬಿಎ ಕ್ರಿಯಾ ಯೋಜನೆಯ 518 ಹಾಗೂ ತಜ್ಞರು ಪಟ್ಟಿ ಮಾಡಿದ 118 ಯೋಜನೆಗಳ ಪರಿಶೀಲಿಸಿದ ಬೆಂಗಳೂರು ಉತ್ತರ ನಗರ ಪಾಲಿಕೆ

November 20, 2026 9:35 PM
ಘನತ್ಯಾಜ್ಯ ನಿರ್ವಹಣೆ ಬಲಪಡಿಸಲು ಸಹಾಸ್ ಜೊತೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಒಪ್ಪಂದ, ಉಚಿತ ತಾಂತ್ರಿಕ ಸಲಹೆ: ಆಯುಕ್ತ ಕೆ.ಎನ್. ರಮೇಶ್ ಹಿಂದೆ ಗಾಂಧೀಜಿ ಮತ್ತು ಅಂಬೇಡ್ಕರ್ ಭಾವಚಿತ್ರಗಳು ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಲಾಂಛನವಿರುವ ಕಚೇರಿಯಲ್ಲಿ ಇ-ಸ್ಟ್ಯಾಂಪ್ ಒಪ್ಪಂದ ಪತ್ರಗಳನ್ನು ಹಿಡಿದು ನಿಂತಿರುವ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ
  • ಬೆಂಗಳೂರು ನಗರ

ಘನತ್ಯಾಜ್ಯ ನಿರ್ವಹಣೆ ಬಲಪಡಿಸಲು ಸಹಾಸ್ ಜೊತೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಒಪ್ಪಂದ, ಉಚಿತ ತಾಂತ್ರಿಕ ಸಲಹೆ: ಆಯುಕ್ತ ಕೆ.ಎನ್. ರಮೇಶ್

November 20, 2026 8:14 PM
ಮಲ್ಲೇಶ್ವರ ಕ್ಷೇತ್ರದ ಪರಿಶೀಲನಾ ಸಭೆ: ಉತ್ತಮ ಮೂಲಸೌಕರ್ಯ, ಸುಗಮ ಸಂಚಾರಕ್ಕೆ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಹಿಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಲಾಂಛನವಿರುವ ಗೋಡೆಯ ಮುಂದೆ ಪರಿಶೀಲನಾ ಸಭೆಯಲ್ಲಿ ಮೇಜಿನ ಬಳಿ ಕುಳಿತಿರುವ ಮೂವರು ಅಧಿಕಾರಿಗಳು
  • ಬೆಂಗಳೂರು ನಗರ

ಮಲ್ಲೇಶ್ವರ ಕ್ಷೇತ್ರದ ಪರಿಶೀಲನಾ ಸಭೆ: ಉತ್ತಮ ಮೂಲಸೌಕರ್ಯ, ಸುಗಮ ಸಂಚಾರಕ್ಕೆ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

November 20, 2026 8:08 PM
ವಿಧಾನಸೌಧದಲ್ಲಿ ನಂದನ್ ನಿಲೇಕಣಿ ನೇತೃತ್ವದ ಪರೀಕ್ಷಾ ಸುಧಾರಣೆಗಳ ಉನ್ನತಾಧಿಕಾರ ಸಮಿತಿ ಪ್ರತಿನಿಧಿಗಳೊಂದಿಗೆ ಸಿಎಂ ಶಿವಕುಮಾರ್ ಸಭೆ ಕರ್ನಾಟಕ ಸರ್ಕಾರದ ಲಾಂಛನವಿರುವ ಸಮಿತಿ ಕೊಠಡಿಯಲ್ಲಿ ಉದ್ದನೆಯ ಮರದ ಮೇಜಿನ ಸುತ್ತ ಕುಳಿತಿರುವ ಮುಖ್ಯಮಂತ್ರಿ ಮತ್ತು ಅಧಿಕಾರಿಗಳು

ವಿಧಾನಸೌಧದಲ್ಲಿ ನಂದನ್ ನಿಲೇಕಣಿ ನೇತೃತ್ವದ ಪರೀಕ್ಷಾ ಸುಧಾರಣೆಗಳ ಉನ್ನತಾಧಿಕಾರ ಸಮಿತಿ ಪ್ರತಿನಿಧಿಗಳೊಂದಿಗೆ ಸಿಎಂ ಶಿವಕುಮಾರ್ ಸಭೆ

November 20, 2026 4:37 PM
1,300 ದಿನ ವಿಳಂಬ: ವಜಾಗೊಂಡಿದ್ದ ಎಂಜಿನಿಯರ್ ಮರುನೇಮಕದ ವಿರುದ್ಧ ವಸತಿ ಮಂಡಳಿಯ ಮೇಲ್ಮನವಿ ತಿರಸ್ಕರಿಸಿದ ಹೈಕೋರ್ಟ್ ಬೆಂಗಳೂರಿನ ಕರ್ನಾಟಕ ಹೈಕೋರ್ಟ್ ಕಟ್ಟಡದ ಮುಂಭಾಗದ ನೋಟ
  • ಕರ್ನಾಟಕ

1,300 ದಿನ ವಿಳಂಬ: ವಜಾಗೊಂಡಿದ್ದ ಎಂಜಿನಿಯರ್ ಮರುನೇಮಕದ ವಿರುದ್ಧ ವಸತಿ ಮಂಡಳಿಯ ಮೇಲ್ಮನವಿ ತಿರಸ್ಕರಿಸಿದ ಹೈಕೋರ್ಟ್

November 20, 2026 4:10 PM

ನೀವು ತಪ್ಪಿಸಿಕೊಂಡಿರಬಹುದು

ಕರ್ನಾಟಕ ಸರ್ಕಾರದ ಲಾಂಛನವಿರುವ ಮರದ ಹೊದಿಕೆಯ ಸಭಾಂಗಣದಲ್ಲಿ ಉದ್ದನೆಯ ಮೇಜುಗಳ ಬಳಿ ಕುಳಿತಿರುವ ಸಮವಸ್ತ್ರಧಾರಿ ಹಿರಿಯ ಪೊಲೀಸ್ ಅಧಿಕಾರಿಗಳು
  • ಬೆಂಗಳೂರು ನಗರ

ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ: ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ಕೇಂದ್ರಗಳಾಗಬಾರದು ಎಂದು ಬೆಂಗಳೂರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಶಿವಕುಮಾರ್ ಎಚ್ಚರಿಕೆ

The Bengaluru Live November 20, 2026 10:24 PM
ಸಭಾಂಗಣದಲ್ಲಿ ಉದ್ದನೆಯ ಮೇಜುಗಳ ಸುತ್ತ ಕುಳಿತಿರುವ ಅಧಿಕಾರಿಗಳು, ನಗರ ಯೋಜನಾ ಸಲಹೆಗಾರರು ಮತ್ತು ನಾಗರಿಕ ಸಂಸ್ಥೆಗಳ ಪ್ರತಿನಿಧಿಗಳು
  • ಬೆಂಗಳೂರು ನಗರ

‘ಬಜೆಟ್ ಟು ಆಕ್ಷನ್’ ಯೋಜನೆಗಳ ಪ್ರಗತಿ ಪರಿಶೀಲನೆ: ಜಿಬಿಎ ಕ್ರಿಯಾ ಯೋಜನೆಯ 518 ಹಾಗೂ ತಜ್ಞರು ಪಟ್ಟಿ ಮಾಡಿದ 118 ಯೋಜನೆಗಳ ಪರಿಶೀಲಿಸಿದ ಬೆಂಗಳೂರು ಉತ್ತರ ನಗರ ಪಾಲಿಕೆ

The Bengaluru Live November 20, 2026 9:35 PM
ಹಿಂದೆ ಗಾಂಧೀಜಿ ಮತ್ತು ಅಂಬೇಡ್ಕರ್ ಭಾವಚಿತ್ರಗಳು ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಲಾಂಛನವಿರುವ ಕಚೇರಿಯಲ್ಲಿ ಇ-ಸ್ಟ್ಯಾಂಪ್ ಒಪ್ಪಂದ ಪತ್ರಗಳನ್ನು ಹಿಡಿದು ನಿಂತಿರುವ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷ
  • ಬೆಂಗಳೂರು ನಗರ

ಘನತ್ಯಾಜ್ಯ ನಿರ್ವಹಣೆ ಬಲಪಡಿಸಲು ಸಹಾಸ್ ಜೊತೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಒಪ್ಪಂದ, ಉಚಿತ ತಾಂತ್ರಿಕ ಸಲಹೆ: ಆಯುಕ್ತ ಕೆ.ಎನ್. ರಮೇಶ್

The Bengaluru Live November 20, 2026 8:14 PM
ಹಿಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಲಾಂಛನವಿರುವ ಗೋಡೆಯ ಮುಂದೆ ಪರಿಶೀಲನಾ ಸಭೆಯಲ್ಲಿ ಮೇಜಿನ ಬಳಿ ಕುಳಿತಿರುವ ಮೂವರು ಅಧಿಕಾರಿಗಳು
  • ಬೆಂಗಳೂರು ನಗರ

ಮಲ್ಲೇಶ್ವರ ಕ್ಷೇತ್ರದ ಪರಿಶೀಲನಾ ಸಭೆ: ಉತ್ತಮ ಮೂಲಸೌಕರ್ಯ, ಸುಗಮ ಸಂಚಾರಕ್ಕೆ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

The Bengaluru Live November 20, 2026 8:08 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಭ್ರಷ್ಟಾಚಾರದ ಬಗ್ಗೆ ಶೂನ್ಯ ಸಹಿಷ್ಣುತೆ: ಪೊಲೀಸ್ ಠಾಣೆಗಳು ರಿಯಲ್ ಎಸ್ಟೇಟ್ ಕೇಂದ್ರಗಳಾಗಬಾರದು ಎಂದು ಬೆಂಗಳೂರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಶಿವಕುಮಾರ್ ಎಚ್ಚರಿಕೆ
  • ‘ಬಜೆಟ್ ಟು ಆಕ್ಷನ್’ ಯೋಜನೆಗಳ ಪ್ರಗತಿ ಪರಿಶೀಲನೆ: ಜಿಬಿಎ ಕ್ರಿಯಾ ಯೋಜನೆಯ 518 ಹಾಗೂ ತಜ್ಞರು ಪಟ್ಟಿ ಮಾಡಿದ 118 ಯೋಜನೆಗಳ ಪರಿಶೀಲಿಸಿದ ಬೆಂಗಳೂರು ಉತ್ತರ ನಗರ ಪಾಲಿಕೆ
  • ಘನತ್ಯಾಜ್ಯ ನಿರ್ವಹಣೆ ಬಲಪಡಿಸಲು ಸಹಾಸ್ ಜೊತೆ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಒಪ್ಪಂದ, ಉಚಿತ ತಾಂತ್ರಿಕ ಸಲಹೆ: ಆಯುಕ್ತ ಕೆ.ಎನ್. ರಮೇಶ್
  • ಮಲ್ಲೇಶ್ವರ ಕ್ಷೇತ್ರದ ಪರಿಶೀಲನಾ ಸಭೆ: ಉತ್ತಮ ಮೂಲಸೌಕರ್ಯ, ಸುಗಮ ಸಂಚಾರಕ್ಕೆ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್
©Copyright 2025 The Bengaluru Live All rights reserved. | MoreNews by AF themes.