ಬೆಂಗಳೂರು: ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ರಾಜಧಾನಿಯ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಜರುಗಿದೆ.
ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ.
ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ