Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಹುಬ್ಬಳ್ಳಿ
  • ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಟೆಕ್‌ಪಾರ್ಕ್ ಉದ್ಘಾಟನೆ
  • ಹುಬ್ಬಳ್ಳಿ

ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಟೆಕ್‌ಪಾರ್ಕ್ ಉದ್ಘಾಟನೆ

The Bengaluru Live September 27, 2021 1:00 PM 1 minute read
TechPark inaugurated at BVB Engineering College in Hubbali

ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಟೆಕ್‌ಪಾರ್ಕ್ ಉದ್ಘಾಟನೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಆರ್ ಆ್ಯಂಡ್ ಡಿ ಹೊಸನೀತಿ ರೂಪಿಸಲು ಕಾರ್ಯಪಡೆ ರಚನೆ: ಮುಖ್ಯಮಂತ್ರಿ

ಹುಬ್ಬಳ್ಳಿ:

ಕೃಷಿ,ತೈಲ,ಕೈಗಾರಿಕೆ ಮತ್ತಿತರ ಎಲ್ಲಾ ರಂಗಗಳಲ್ಲಿ ಇಂದು ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಆ್ಯಂಡ್ ಡಿ) ಅಗತ್ಯವಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದ 180 ಆರ್ ಆ್ಯಂಡ್ ಡಿ ಕೇಂದ್ರಗಳಿವೆ.ಅವುಗಳಿಗೆ ಹೆಚ್ಚು ಮಹತ್ವ ನೀಡಿ,ಕೈಗಾರಿಕೆ,ಕೃಷಿ,ಆಹಾರ ರಂಗದಲ್ಲಿ ಆರ್ ಆ್ಯಂಡ್ ಡಿ ಬಳಕೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಉದ್ದೇಶಿಸಿದೆ. ಹೊಸ ಆರ್ ಆ್ಯಂಡ್ ಡಿ ನೀತಿ ರಚನೆಗೆ ಕಾರ್ಯಪಡೆ ಅಧ್ಯಕ್ಷರನ್ನಾಗಿ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಉಪಕುಲಪತಿ ಡಾ.ಅಶೋಕ ಶೆಟ್ಟರ್ ಅವರನ್ನು ನೇಮಿಸಲು ಚಿಂತನೆ ನಡೆದಿದೆ. ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಕೆಎಲ್‌ಇ ಟೆಕ್‌ಪಾರ್ಕಿನ ಅಭಿವೃದ್ಧಿಗೆ ಅಗತ್ಯವಾಗಿರುವ ಇನ್ನೂ 2 ಕೋಟಿ ರೂ.ಗಳನ್ನು ಹಳೆಯ ವಿದ್ಯಾರ್ಥಿಗಳ ಸಂಘದ ಮೂಲಕ ಕ್ರೋಢೀಕರಿಸಿ ನೀಡಲಾಗುವುದು. ಸ್ಟಾರ್ಟ್ ಅಪ್‌ಗಳ ಉತ್ತೇಜನಕ್ಕಾಗಿ ಹುಬ್ಬಳ್ಳಿ ಮತ್ತು ಕಲಬುರ್ಗಿಯಲ್ಲಿ ಪ್ರಾದೇಶಿಕ ಕಚೇರಿಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿನ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ 75 ನೇ ವರ್ಷಾಚರಣೆ ಹಾಗೂ ಕೆಎಲ್‌ಇ ಟೆಕ್‌ ಪಾರ್ಕ್ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದ ಸಮಗ್ರ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ದೊಡ್ಡದು.ಯುವಕರಲ್ಲಿ ವಿದ್ಯೆ,ವ್ಯಕ್ತಿತ್ವ ನಿರ್ಮಾಣ ಮಾಡುವುದು ಸಂಸ್ಥೆ ,ಸರ್ಕಾರಗಳ ಜವಾಬ್ದಾರಿ. ಕಾಲೇಜಿನ ಹಳೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ ಸಂಸ್ಥೆಗೆ,ಸಮಾಜಕ್ಕೆ ಉತ್ತಮ ಮಾನವ ಸಂಪನ್ಮೂಲವಾಗಿ ಕೊಡುಗೆಗಳನ್ನು ಮರಳಿ ನೀಡಬೇಕು.ಕೆಎಲ್‌ಇ ಸಂಸ್ಥೆಯ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜು ವಿವಿಧ ಬಹು ಅಧ್ಯಯನ ಶಿಸ್ತುಗಳಲ್ಲಿ ಮಾದರಿಯಾಗಿ ರೂಪುಗೊಂಡಿದೆ.

  • TechPark inaugurated at BVB Engineering College in Hubbali
  • TechPark inaugurated at BVB Engineering College in Hubbali
  • TechPark inaugurated at BVB Engineering College in Hubbali

ಇಂದು ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಸಂಪೂರ್ಣ ಸ್ವರೂಪವೇ ಬದಲಾಗಿದ್ದು, ಮತ್ತೊಮ್ಮೆ ವಿದ್ಯಾರ್ಥಿಯಾಗಿ ಪ್ರವೇಶಪಡೆಯಲು ಮನಸ್ಸಾಗುತ್ತಿದೆ ಎಂದು ತಮಗೆ ವಿದ್ಯೆ ನೀಡಿದ ಸರಸ್ವತಿ ದೇಗುಲದ ಬಗ್ಗೆ ಮನದುಂಬಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,ತಮಗೆ ಕಲಿಸಿದ ಪ್ರಾಧ್ಯಾಪಕರು,ಹಿರಿಯ-ಕಿರಿಯ ಸಹಪಾಠಿಗಳನ್ನು, ಹಾಜರಾಗದ ಪ್ರಯೋಗಾಲಯಗಳು,ಪುಸ್ತಕ ಪಡೆಯದ ಗ್ರಂಥಾಲಯಗಳು,ಹಾಸ್ಟೇಲು,ಕ್ಯಾಂಪಸ್,ಕ್ಯಾಂಟೀನ್ ಎಲ್ಲವನ್ನೂ ವಿನೋದವಾಗಿ ನೆನಪಿಸಿಕೊಂಡರು.

ಮುಖ್ಯಮಂತ್ರಿಯಾಗಿ ಕೈಗೊಳ್ಳುವ ಎಲ್ಲಾ ಜನಪರ ಕಾರ್ಯಗಳಲ್ಲಿ ಬಿವಿಬಿ ಕಾಲೇಜು ಕಲಿಸಿದ ಪಾಠಗಳ ಪಾತ್ರ ಇರುತ್ತದೆ. ಆಡಳಿತದಲ್ಲಿ ತಾಂತ್ರಿಕತೆ,ವೈಜ್ಞಾನಿಕತೆ ತರಲು ಉತ್ಸುಕನಾಗಿದ್ದೇನೆ.ಪ್ರತಿ ಹಂತದಲ್ಲಿಯೂ ನನ್ನ ಜ್ಞಾನವನ್ನು ಪ್ರಸ್ತುತ ಸಂಶೋಧನೆಗಳೊಂದಿಗೆ ತಾಳೆ ಮಾಡಿ ಪರೀಕ್ಷಿಸಿಕೊಳ್ಳುತ್ತಿರುತ್ತೇನೆ.ಸಾರ್ವಜನಿಕ ಉಪಯೋಗ, ಸಂಕೇತಗಳ ರವಾನೆಗೆ ವೈರ್‌ಲೆಸ್ ತಂತ್ರಜ್ಞಾನ,ಇಲೆಕ್ಟ್ರಿಕಲ್,ಇಲೆಕ್ಟ್ರಾನಿಕ್ಸ್,ಸಾಫ್ಟವೇರ್ ಕ್ಷೇತ್ರಗಳ ಅತ್ಯಾಧುನಿಕ ವಿದ್ಯೆ ,ಸಂಶೋಧನೆಗಳಲ್ಲಿ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜು ಮಹತ್ವದ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಹಿಂದೆ ನಾನು ವಿದ್ಯಾರ್ಥಿಯಾಗಿದ್ದಾಗ ಕರ್ನಾಟಕ ವಿವಿ ಕುಲಪತಿಗಳಾಗಿದ್ದ ಡಾ.ಡಿ.ಎಂ.ನಂಜುಂಡಪ್ಪ ಅವರ ಕಾಠಿಣ್ಯ,ಶಿಸ್ತು,ಬದ್ಧತೆಯಿಂದ ನಮ್ಮ ವ್ಯಾಸಂಗ ಪೂರ್ಣವಾಗಲು ಸಾಧ್ಯವಾಯಿತು. ಉತ್ತಮ ಭೂತಕಾಲವಷ್ಟೇ ಅಲ್ಲ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದು ಅಷ್ಟೇ ಮುಖ್ಯ. ರಾಜಕೀಯವೂ ಒಂದು ವಿಜ್ಞಾನವೇ ಆಗಿದೆ ಅಲ್ಲಿಯೂ ವೈಜ್ಞಾನಿಕ ವಿಧಾನಗಳಿವೆ.ತಾಂತ್ರಿಕ ಹಾಗೂ ವೈಜ್ಞಾನಿಕ ಸಂಶೋಧನೆಗಳನ್ನು ರಾಜತಾಂತ್ರಿಕವಾಗಿ ಬಳಸುವುದು ರಾಜಕೀಯ ವಿಜ್ಞಾನವಾಗಿದೆ. ಎಲ್ಲಾ ದೇಶಗಳು ಈ ನೀತಿ ಪಾಲಿಸಬೇಕು‌.ಕರ್ತವ್ಯವನ್ನು ನೈತಿಕತೆಯ ತಳಹದಿಯೊಂದಿಗರವಕಾಯಕದ ರೀತಿಯಲ್ಲಿ ನಿರ್ವಹಿಸಬೇಕು.ದೇಶದ ಬಡತನ,ಆರೋಗ್ಯ,ಶಿಕ್ಷಣ,ಆರ್ಥಿಕ ಸವಾಲುಗಳನ್ನು ಅರಿಯಲು ನಾವು ಸದಾ ಕಾಲ ಜನರ ನಡುವೆ ಇರಬೇಕು,ಅದೇ ಜನರ,ಜನಪರ ರಾಜಕೀಯವಾಗಿದೆ.

ಪ್ರಧಾನಮಂತ್ರಿಗಳು ಸಕ್ಕರೆ ಕಾರ್ಖಾನೆಗಳಲ್ಲಿ ಇಥೆನಾಲ್ ಉತ್ಪಾದನೆಗೆ ಶೇ.20 ರಷ್ಟು ಅವಕಾಶ ನೀಡಿದ್ದಾರೆ.ಮುರುಗೇಶ್ ನಿರಾಣಿ ಅವರ ಇದರ ಸದುಪಯೋಗ ಪಡೆದವರಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದರು.

ಮುಖ್ಯಮಂತ್ರಿ @BSBommai ಅವರು ಇಂದು ಹುಬ್ಬಳ್ಳಿಯ ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ;ಕೆ.ಎಲ್‌.ಇ ಟೆಕ್‌ ಪಾರ್ಕ್' ಉದ್ಘಾಟಿಸಿದರು.

ಬೃಹತ್, ಮಧ್ಯಮ ಕೈಗಾರಿಕೆ ಸಚಿವ @NiraniMurugesh, ಕೆ.ಎಲ್‌.ಇ ಕಾರ್ಯಾಧ್ಯಕ್ಷ @prabhakarbkore ಮತ್ತಿತರರು ಇದ್ದರು.@KLETechbvb pic.twitter.com/oSGfOxgXU4

— CM of Karnataka (@CMofKarnataka) September 27, 2021

ಬೃಹತ್ ,ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ ಮಾತನಾಡಿ,ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ಇಂದು ಮುಖ್ಯಮಂತ್ರಿಯವರೊಂದಿಗೆ ಹಂಚಿಕೊಳ್ಳುತ್ತಿರುವುದು, ತವರಿಗೆ ಬಂದಿರುವ ಸಂತಸದ ಭಾವನೆ ಮೂಡಿಸಿದೆ.ಕೆಎಲ್‌ಇ ಸಪ್ತರ್ಷಿಗಳ ಪ್ರಯತ್ನದಿಂದ ಈ ಭಾಗದಲ್ಲಿ ಶಿಕ್ಷಣದ ಕ್ರಾಂತಿಯಾಗಲು,ವಿಶೇಷವಾಗಿ ಮಹಿಳೆಯರು ತಾಂತ್ರಿಕ ಶಿಕ್ಷಣ ಪಡೆಯಲು ಸಾಧ್ಯವಾಗಿದೆ.3-4 ದಶಕಗಳ ಹಿಂದೆ ಕೇವಲ ಸುಮಾರು 500 ರಿಂದ 600 ವಿದ್ಯಾರ್ಥಿಗಳಿದ್ದ ಈ ಕಾಲೇಜು ಇಂದು ಸಾಕಷ್ಟು ಅಭಿವೃದ್ಧಿ ಹೊಂದಿದೆ.ಸುಮಾರು 6 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಕೇವಲ ಉದ್ಯೋಗಿಗಳಾಗದೇ ಮತ್ತೊಬ್ಬರಿಗೆ ಕೆಲಸ ನೀಡುವ ಉದ್ಯಮಪತಿಗಳಾಗಬೇಕು .ಸರ್ಕಾರ ಅನೇಕ ಪ್ರೋತ್ಸಾಹಕ ಯೋಜನೆಗಳ ಪ್ರಯೋಜನ ಪಡೆಯಬೇಕು .ಅಕ್ಟೋಬರ್ 15 ರಿಂದ ತಮ್ಮ ನಿರಾಣಿ ಸಮೂಹ ಸಂಸ್ಥೆಗಳ ಉದ್ಯಮ ಘಟಕಗಳು ಪುನರಾರಂಭ ಮಾಡಲಿವೆ.ಕಾಲೇಜಿನ ವಿದ್ಯಾರ್ಥಿಗಳು ಅಲ್ಲಿಗೆ ಭೇಟಿ ನೀಡಿ ಸ್ಫೂರ್ತಿ ಪಡೆಯಲಿ ಎಂದರು.

ಸಮಾರಂಭದ ಅಧ್ಯಕ್ಷತೆವಹಿಸಿದ್ದ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಮಾತನಾಡಿ, ಇದೇ ಸಂದರ್ಭದಲ್ಲಿ ಕೆಎಲ್ಇ ಸಂಸ್ಥೆ ಹಾಗೂ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ , ಸಂಸ್ಥೆಯ ಹಳೆಯ ವಿದ್ಯಾರ್ಥಿಗಳೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಮುರುಗೇಶ್ ನಿರಾಣಿ ಅವರನ್ನು ಸನ್ಮಾನಿಸಲಾಯಿತು.

ಕೈಮಗ್ಗ,ಜವಳಿ ,ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಂಕರ್ ಪಾಟೀಲ ಮುನೇನಕೊಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೆಎಲ್‌ಇ ತಾಂತ್ರಿಕ ವಿವಿ ಉಪಕುಲಪತಿ ಡಾ.ಅಶೋಕ ಶೆಟ್ಟರ್ ಸ್ವಾಗತಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: ಜೆಡಿಎಸ್ ಮುಖಂಡ ಹನುಮಂತೇಗೌಡ ಹಾಗೂ ಮಾಜಿ ಉಪಮೇಯರ್ ಆನಂದ್ ಎಂ ಕಾಂಗ್ರೆಸ್ ಸೇಪರ್ಡೆ
Next: ಭಾರತ್ ಬಂದ್ ಭದ್ರತೆಯಲ್ಲಿದ್ದ ಡಿಸಿಪಿ ಕಾಲಿನ ಮೇಲೆ ಕಾರು ಹರಿಸಿದ ಚಾಲಕ

Related Stories

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ
  • ಬೆಂಗಳೂರು ನಗರ
  • ನವ ದೆಹಲಿ
  • ಶಿಕ್ಷಣ
  • ಹುಬ್ಬಳ್ಳಿ

ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ್ ಜೋಶಿ ಅಧಿಕಾರ ಸ್ವೀಕಾರ

The Bengaluru Live July 26, 2026 3:03 PM
ಧರ್ಮೇಂದ್ರ ಪ್ರಧಾನ ರಾಜೀನಾಮೆ ಅಂಗೀಕಾರ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ
  • ಶಿಕ್ಷಣ
  • ನವ ದೆಹಲಿ
  • ಹುಬ್ಬಳ್ಳಿ

ಧರ್ಮೇಂದ್ರ ಪ್ರಧಾನ ರಾಜೀನಾಮೆ ಅಂಗೀಕಾರ; ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪ್ರಲ್ಹಾದ್ ಜೋಶಿಗೆ

The Bengaluru Live July 25, 2026 8:32 PM
ಲೊಂಡಾ ಯಾರ್ಡ್ ಇಂಜಿನಿಯರಿಂಗ್ ಕಾಮಗಾರಿಗಳ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಭಾಗಶಃ ರದ್ದು ಹಾಗೂ ನಿಯಂತ್ರಣವನ್ನು ದಕ್ಷಿಣ ಪಶ್ಚಿಮ ರೈಲ್ವೆ ಘೋಷಿಸಿದೆ
  • ಹುಬ್ಬಳ್ಳಿ

ಲೊಂಡಾ ಯಾರ್ಡ್ ಇಂಜಿನಿಯರಿಂಗ್ ಕಾಮಗಾರಿಗಳ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಭಾಗಶಃ ರದ್ದು ಹಾಗೂ ನಿಯಂತ್ರಣವನ್ನು ದಕ್ಷಿಣ ಪಶ್ಚಿಮ ರೈಲ್ವೆ ಘೋಷಿಸಿದೆ

The Bengaluru Live July 14, 2026 7:56 PM

Latest Post

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM
ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

November 12, 2026 7:04 PM
ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ ಓಕಳಿಪುರಂ ಎಂಟು ಪಥದ ಕಾರಿಡಾರ್ ಬಳಿ ರಾತ್ರಿ ಡಾಂಬರೀಕರಣ ಕಾಮಗಾರಿಯಲ್ಲಿ ರಸ್ತೆ ರೋಲರ್
  • ಬೆಂಗಳೂರು

ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ

November 12, 2026 3:58 PM
ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಕೃಷ್ಣ ಬೈರೇಗೌಡ ಮತ್ತು ಅಧಿಕಾರಿಗಳು
  • ಬೆಂಗಳೂರು

ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ

November 12, 2026 3:50 PM

ನೀವು ತಪ್ಪಿಸಿಕೊಂಡಿರಬಹುದು

parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

The Bengaluru Live November 12, 2026 7:10 PM
tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

The Bengaluru Live November 12, 2026 7:07 PM
bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

The Bengaluru Live November 12, 2026 7:04 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
  • ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್
  • ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ
  • ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ
©Copyright 2025 The Bengaluru Live All rights reserved. | MoreNews by AF themes.