Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Bengaluru Garbage Tender: ಬೆಂಗಳೂರು ಕಸ ವಿಲೇವಾರಿಗೆ 33 ಪ್ಯಾಕೇಜ್ ಗಳಾಗಿ ಟೆಂಡರ್, ಕಸದ ಸೆಸ್ ಶೇ. 25ರಷ್ಟು ಮಾತ್ರ ಅಳವಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್
  • ಬೆಂಗಳೂರು ನಗರ

Bengaluru Garbage Tender: ಬೆಂಗಳೂರು ಕಸ ವಿಲೇವಾರಿಗೆ 33 ಪ್ಯಾಕೇಜ್ ಗಳಾಗಿ ಟೆಂಡರ್, ಕಸದ ಸೆಸ್ ಶೇ. 25ರಷ್ಟು ಮಾತ್ರ ಅಳವಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

Tender for Bengaluru garbage disposal in 33 packages, garbage cess to be implemented at only 25%: DCM D.K. Shivakumar
The Bengaluru Live August 21, 2025 5:48 PM 1 minute read
Tender for Bengaluru garbage disposal in 33 packages, garbage cess to be implemented at only 25%: DCM D.K. Shivakumar

Bengaluru Garbage Tender: ಬೆಂಗಳೂರು ಕಸ ವಿಲೇವಾರಿಗೆ 33 ಪ್ಯಾಕೇಜ್ ಗಳಾಗಿ ಟೆಂಡರ್, ಕಸದ ಸೆಸ್ ಶೇ. 25ರಷ್ಟು ಮಾತ್ರ ಅಳವಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: “ನಗರದ ಕಸ ವಿಲೇವಾರಿಗೆ 28 ವಿಧಾನಸಭಾ ಕ್ಷೇತ್ರಗಳಲ್ಲಿ 33 ಪ್ಯಾಕೇಜ್ ಗಳಾಗಿ ವಿಂಗಡಿಸಿ ಟೆಂಡರ್ ಕರೆಯಲಾಗಿದೆ. ನಾಲ್ಕು ಜಾಗಗಳಲ್ಲಿ ತ್ಯಾಜ್ಯದಿಂದ ಗ್ಯಾಸ್, ವಿದ್ಯುತ್ ಉತ್ಪಾದಿಸುವ ಯೋಜನೆ ರೂಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕೇಶವ ಪ್ರಸಾದ್ ಅವರು ಬೆಂಗಳೂರಿನ ಕಸ ವಿಲೇವಾರಿ ಹಾಗೂ ಕಸದ ಸೆಸ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

Also Read: Bengaluru Waste Management: 33 Tender Packages Announced, DCM D.K. Shivakumar Targets Garbage Mafia and New Cess Rules

“ಕಸ ವಿಲೇವಾರಿಗೆ ನೈಸ್ ಸಂಸ್ಥೆಗೆ ಸೇರಿದ ಜಾಗವನ್ನು ಪಡೆಯಲಾಗಿದೆ. ದೊಡ್ಡಬಳ್ಳಾಪುರ ಬಳಿಯ ಜಾಗಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಬಾಕಿಯಿತ್ತು. ಕ್ಯಾಬಿನೆಟ್ ಅನುಮತಿ ಪಡೆದು ಮುಂದುವರಿದಿದ್ದೇವೆ. ಕಸ ವಿಲೇವಾರಿಗೆಂದು ಆಧುನಿಕ ತಂತ್ರಜ್ಞಾನದ ಬಗ್ಗೆ ಅಧ್ಯಯನ ಮಾಡಲಾಗುತ್ತಿದೆ. ಇದನ್ನು ಗುತ್ತಿಗೆ ಆಧಾರದ ಮೇಲೆ ನಿರ್ವಹಣೆ ಮಾಡಬೇಕು ಎನ್ನುವ ಆಲೋಚನೆಯಿದೆ.” ಎಂದು ತಿಳಿದರು.

ಕಸದ ಮಾಫಿಯಾ ಭೇದಿಸುವುದು ಸುಲಭವಿಲ್ಲ

“ಬೆಂಗಳೂರಿನ ಕಸದ ಮಾಫಿಯಾವನ್ನು ಅಷ್ಟು ಸುಲಭದಲ್ಲಿ ಭೇದಿಸಲು ಆಗುವುದಿಲ್ಲ. ನಿಮ್ಮ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ 98 ವಾರ್ಡ್ ಗಳಿಗೆ ಟೆಂಡರ್ ಕರೆದಾಗ ಅದನ್ನೂ ಮಾಡಲು ಬಿಡಲಿಲ್ಲ. ಕಸ ವಿಲೇವಾರಿ ವಿಚಾರಕ್ಕೆ ನಾನೂ ಸಹ ದೊಡ್ಡ ಹೋರಾಟ ಮಾಡಿದೆ. ಈ ಹಿಂದಿನ ಟೆಂಡರ್ ವ್ಯವಸ್ಥೆ ರದ್ದುಗೊಳಿಸಿ ಹೊಸ ಟೆಂಡರ್ ಕರೆಯಬೇಕು ಎಂದು ನ್ಯಾಯಲಯ ನಮ್ಮಿಂದ ಅಫಿಡವಿಟ್ ಬರೆಸಿಕೊಂಡಿದೆ. ಟೆಂಡರ್ ನಲ್ಲಿ ಅಕ್ರಮ ನಡೆದಿದೆ ಎಂದು ವರದಿ ಬಂದ ಮೇಲೆ ತನಿಖೆ ನಡೆಸಿ ರದ್ದುಗೊಳಿಸಲಾಗಿದೆ. ಕಸ ವಿಲೇವಾರಿ ಘಟಕಗಳನ್ನು ಸಹ ತೆರೆಯಲಾಗಿದೆ” ಎಂದರು.

“ಕಸದ ಸಮಸ್ಯೆ ನಿವಾರಿಸಲು ದೆಹಲಿ, ಹೈದರಾಬಾದ್, ಚೆನ್ನೈ ನಗರಗಳಿಗೆ ಹೋಗಿ ಕಸ ವಿಲೇವಾರಿ ಮಾದರಿಯನ್ನು ನೋಡಿಕೊಂಡು ಬಂದಿದ್ದೇನೆ. ನಾನು ಈ ಹಿಂದೆ ಇಂಧನ ಸಚಿವನಾಗಿದ್ದಾಗ ಒಂಬತ್ತು ಕಡೆ ಕಸ ಆಧಾರಿತ ಇಂಧನ ತಯಾರಿಕೆ ಘಟಕಗಳನ್ನು ಸ್ಥಾಪಿಸಲಾಗಿತ್ತು. ಆದರೆ ಒಂದೇ ಒಂದು ಸಹ ಯಶಸ್ವಿಯಾಗಿಲ್ಲ. ಪ್ರಸ್ತುತ ಬಿಡದಿಯಲ್ಲಿ ಒಂದು ಘಟಕ ಮಾತ್ರ ಕಾರ್ಯಾಚರಣೆ ನಡೆಸುತ್ತಿದೆ. ಸಣ್ಣ ವಿದ್ಯುತ್ ಘಟಕಗಳನ್ನು ಮಾಡಲು ಸಾಧ್ಯವಿಲ್ಲ. ಕನಿಷ್ಠ 20 ಮೆ.ವ್ಯಾ. ಉತ್ಪಾದನೆ ಮಾಡಲು ಸಾಧ್ಯವಿದ್ದರೆ ಮಾತ್ರ ಸ್ಥಾಪಿಸಬಹುದು” ಎಂದರು.

ಕಸದ ಮೇಲಿನ ಸೆಸ್ ಅಳವಡಿಸಿದ್ದು ಬಿಜೆಪಿ

ಕಸದ ಮೇಲಿನ ಸೆಸ್ ವಿಚಾರಾಗಿ ಉತ್ತರಿಸಿದ ಡಿಸಿಎಂ ಅವರು, “2016 ರಲ್ಲಿ ಕೇಂದ್ರ ಸರ್ಕಾರದ ಘನತ್ಯಾಜ್ಯ ನಿರ್ವಹಣಾ ನಿಯಮದ ಪ್ರಕಾರ ನೂತನ ಆದೇಶ ನೀಡಿತು. 2020 ರಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರ ಕಳುಹಿಸಿದ ಕಸ ಸಂಗ್ರಹ ದರಪಟ್ಟಿಯನ್ನು ಅಳವಡಿಸಿಕೊಂಡಿತು” ಎಂದು ಗೆಜೆಟ್ ಪ್ರತಿಯ ವಿವರವನ್ನು ಸದನಕ್ಕೆ ಓದಿ ತಿಳಿಸಿದರು.

“ಈ ಗೆಜೆಟ್ ಪ್ರತಿಯಲ್ಲಿ ಐದು ಕೆಜಿಗೆ ರೂ.500, ಹತ್ತು ಕೆಜಿಗೆ ರೂ.1,400, ಇಪ್ಪತ್ತೈದು ಕೆಜಿಗೆ ರೂ.3,400, ಐವತ್ತು ಕೆಜಿಗೆ ರೂ.7000, ನೂರು ಕೆಜಿಗೆ ರೂ 14,000 ಶುಲ್ಕ ವಿಧಿಸಬೇಕು ಎಂದು ಹೇಳಲಾಗಿದೆ. ಇದನ್ನು ನೋಡಿ ನನಗೂ ಆಶ್ಚರ್ಯವಾಯಿತು. ಅಲ್ಲದೇ ಖಾಲಿ ಇರುವ ನಿವೇಶನಗಳಿಗೆ ಪ್ರತಿ ಚದರ ಅಡಿಗೆ ರೂ.20 ಶುಲ್ಕ ವಿಧಿಸಬೇಕು ಎಂದಿದೆ. ಈ ದರಗಳು ಹೆಚ್ಚಾಯಿತು ಎಂದು ಅದರಲ್ಲಿ ಕೇವಲ ಶೇ. 25ರಷ್ಟು ಮಾತ್ರ ಸಂಗ್ರಹ ಮಾಡುತ್ತಿದ್ದೇವೆ. ಒಂದು ನಿವೇಶನಕ್ಕೆ ಪ್ರತಿ ಚದರ ಅಡಿಗೆ 2.40 ರೂ. ಸಂಗ್ರಹ ಮಾಡುವಂತೆ ತೀರ್ಮಾನ ಮಾಡಲಾಗಿದೆ” ಎಂದರು.

“ದೊಡ್ಡ ಮಾಲ್ ಗಳು ತಮ್ಮ ಉತ್ಪಾದಿತ ಕಸವನ್ನು ತಾವೇ ವಿಲೇವಾರಿ ಮಾಡಿಕೊಳ್ಳುತ್ತೇವೆ ಎಂದು ಘೋಷಣೆ ಮಾಡಿಕೊಂಡಿವೆ. ಅದಕ್ಕೆ ನಾವು ಸಹ ಬೆಂಬಲ ನೀಡುತ್ತೇವೆ. ಖಾಲಿ ನಿವೇಶನಗಳು ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂದು ಹೊಸ ಕಾನೂನು ಮಾಡಲು ಮುಂದಾಗಿದ್ದೇವೆ. ಇತ್ತೀಚೆಗೆ ಪ್ರಧಾನಿಯವರು ನಗರಕ್ಕೆ ಬಂದಾಗ ಅರಮನೆ ರಸ್ತೆಯಲ್ಲಿ ಹಸಿರು ಪರದೆ ಕಟ್ಟಲಾಯಿತು. ಅಲ್ಲಿಜಾಗ ಖಾಲಿಯಿದೆ ಎಂದು ಜನರು ಕಸ ಎಸೆಯುತ್ತಿದ್ದಾರೆ” ಎಂದು ಹೇಳಿದರು.

“ಯಾವ ರೀತಿಯ ಕಸ ಉತ್ಪಾದನೆಯಾಗುತ್ತದೆ ಎಂದು ನಾಗರೀಕರು ಸ್ವತಃ ಘೋಷಿಸಲು ಅವಕಾಶ ನೀಡಲಾಗಿದೆ. ಇದರ ಅನ್ವಯ 35 ಸಾವಿರ ಜನರು ಸ್ವಯಂ ಘೋಷಣೆ ಮಾಡಿದ್ದಾರೆ. ಇವರುಗಳೇ ಕಸವನ್ನು ವಿಲೇವಾರಿ ಮಾಡಿಕೊಳ್ಳುತ್ತಾರೆ. ಕಟ್ಟಡ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಸುರಿಯುವವರನ್ನು ಗುರುತಿಸಿ ಪ್ರಕರಣ ದಾಖಲಿಸಬೇಕು ಎಂದು ಪೊಲೀಸರಿಗೆ ಸೂಚಿಸಿದ್ದೇನೆ. ಇದರ ಬಗ್ಗೆಯೂ ಟೆಂಡರ್ ಕರೆಯಲಾಗಿದೆ. ಅಲ್ಲಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗವುದು” ಎಂದರು.

About the Author

The Bengaluru Live

Administrator

Visit Website View All Posts

Post navigation

Previous: BIMS Super Multi Specialty Hospital in Belgaum City starts operations, treatment: ಬೆಳಗಾವಿ ನಗರದಲ್ಲಿನ ಬಿಮ್ಸ್ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾರ್ಯಾರಂಭ‌ ಚಿಕಿತ್ಸೆಯೂ ಲಭ್ಯ: ಡಾ. ಶರಣಪ್ರಕಾಶ ಆರ್.‌ ಪಾಟೀಲ
Next: Bangalore Rural MP Dr. C.N. Manjunath: ಕ್ಯಾನ್ಸರ್ ಚಿಕಿತ್ಸಾ ವೆಚ್ಚ ತಗ್ಗಿಸಲು ಇಮ್ಯೂನೋಥೆರಪಿ ಔಷಧಿ ಮತ್ತು ರೇಡಿಯೋಥೆರಪಿ ಸಾಧನಗಳ ಕಸ್ಟಮ್ಸ್ ಸುಂಕ ವಿನಾಯಿತಿ ಕೇಳಿದ ಬೆಂಗಳೂರು ಗ್ರಾಮಾಂತರ ಸಂಸದ ಡಾ. ಸಿ.ಎನ್. ಮಂಜುನಾಥ

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM
ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್ ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

November 24, 2026 9:08 PM
11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

November 24, 2026 8:23 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

The Bengaluru Live November 24, 2026 9:09 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
  • ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ
©Copyright 2025 The Bengaluru Live All rights reserved. | MoreNews by AF themes.