Home ಬೆಂಗಳೂರು ನಗರ Tungabhadra reservoir: ತುಂಗಭದ್ರಾ ಜಲಾಶಯಕ್ಕೆ 39 ಗೇಟ್ ಅಳವಡಿಸಲು ಟೆಂಡರ್ ಕರೆಯಲಾಗಿದೆ:ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Tungabhadra reservoir: ತುಂಗಭದ್ರಾ ಜಲಾಶಯಕ್ಕೆ 39 ಗೇಟ್ ಅಳವಡಿಸಲು ಟೆಂಡರ್ ಕರೆಯಲಾಗಿದೆ:ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

14
0
Tenders have been called for installation of 39 gates for Tungabhadra reservoir: Deputy Chief Minister D.K. Shivakumar

ಬೆಂಗಳೂರು, ಅಗಸ್ಟ್ 20(ಕರ್ನಾಟಕ ವಾರ್ತೆ): ತುಂಗಭದ್ರಾ ಜಲಾಶಯದ 39 ಗೇಟ್ ಅಳವಡಿಸಲು ಟೆಂಡರ್ ಕರೆಯಲಾಗಿದೆ. ಈಗಾಗಲೇ 6 ಗೇಟ್ ಗಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಇಂದು ವಿಧಾನಸಭಾ ಅಧಿವೇಶನದಲ್ಲಿ ನಿಯಮ 69ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಮೇಲೆ ಸದಸ್ಯರುಗಳಾದ ಹಂಪನಗೌಡ ಬಾದರ್ಲಿ, ಬಸನಗೌಡ ದದ್ದಲ್ ಮತ್ತು ಬಸನಗೌಡ ತುರುವಿಹಾಳ ಇವರುಗಳು ತುಂಗಾಭದ್ರಾ ಜಲಾಶಯದ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಉತ್ತರ ನೀಡಿದ ಉಪಮುಖ್ಯಮಂತ್ರಿಗಳು, ತುಂಗಾಭದ್ರ ಜಲಾಶಯದ ಬೋರ್ಡ್ ನವರು 1633 ಅಡಿ ಬದಲಿಗೆ 1626 ಅಡಿ ನೀರನ್ನು ಸಂಗ್ರಹಿಸಲು ಸೂಚಿಸಿದ್ದಾರೆ.

ತಾಂತ್ರಿಕ ತೊಂದರೆಯಿಂದಾಗಿ ರೈತರಿಗೆ ಈ ಬಾರಿ ಎರಡನೇ ಬೆಳೆಗೆ ನೀರು ನೀಡಲು ಸಾಧ್ಯವಾಗುವುದಿಲ್ಲ. ರೈತರ ಹಿತ ಕಾಪಾಡಲು ಸರ್ಕಾರವು ಬದ್ಧವಾಗಿದೆ. ಕುಡಿಯುವ ನೀರು ಕೈಗಾರಿಕೆಗಳಿಗೆ ನೀರು ಕೊಡಲಾಗುವುದು. ದುರಸ್ತಿ ಕಾಮಗಾರಿಗಳನ್ನು ಹಾಗೂ ಸಿಬ್ಬಂದಿ ಕೊರತೆ ನೀಗಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

LEAVE A REPLY

Please enter your comment!
Please enter your name here