Home ಬೆಂಗಳೂರು ನಗರ ಪಠ್ಯ ಪುಸ್ತಕ ಪರಿಷ್ಕರಣೆ : ಮಾಜಿ ಪ್ರಧಾನಿ ದೇವೇಗೌಡರಿಗೆ ಗೌರವಪೂರ್ವಕ ಉತ್ತರ ನೀಡಲಾಗುವುದು

ಪಠ್ಯ ಪುಸ್ತಕ ಪರಿಷ್ಕರಣೆ : ಮಾಜಿ ಪ್ರಧಾನಿ ದೇವೇಗೌಡರಿಗೆ ಗೌರವಪೂರ್ವಕ ಉತ್ತರ ನೀಡಲಾಗುವುದು

30
0
Textbook Revision: Former Prime Minister Deve Gowda will be answered respectfully
Advertisement
bengaluru

ಬೆಂಗಳೂರು:

ಮಾಜಿ ಪ್ರಧಾನಿಗಳು ಮತ್ತು ಹಿರಿಯರಾದ ಹೆಚ್.ಡಿ. ದೇವೇಗೌಡರು ಪಠ್ಯ ಪುಸ್ತಕ ಪರಿಷ್ಕರಣೆಯ ಬಗ್ಗೆ ಬರೆದಿರುವ ಪತ್ರಕ್ಕೆ ಗೌರವಪೂರ್ವಕವಾಗಿ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ನಾಳೆ ಶಿಕ್ಷಣ ಇಲಾಖೆಯ ಮುಖ್ಯಸ್ಥರನ್ನು ಹಾಗೂ ಸಚಿವರನ್ನು ಕರೆಯಲಾಗುತ್ತಿದೆ. ಸಭೆಯಲ್ಲಿ ಮಾಜಿ ಪ್ರಧಾನಿಗಳ ಪತ್ರದ ಸಾರವನ್ನು ಅವಲೋಕಿಸಲಾಗುವುದು. ಅವರ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬ ಬಗ್ಗೆ ತೀರ್ಮಾನಿಸಿ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

bengaluru bengaluru

bengaluru

LEAVE A REPLY

Please enter your comment!
Please enter your name here