Home ಬೆಂಗಳೂರು ನಗರ ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ

ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ

100
0
Thaawarchand Gehlot takes oath as 19th Governor of Karnataka

ಬೆಂಗಳೂರು:

ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಭಾನುವಾರ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ 73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕದ 19ನೇ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಥಾವರ್ ಚಂದ್ ಗೆಹ್ಲೋಟ್‌ಗೆ ಆಡಳಿತ ಮತ್ತು ಗೌಪ್ಯತೆಯ ಪ್ರಮಾಣ ವಚನವನ್ನು ಬೋಧಿಸಿದರು.

Thaawarchand Gehlot takes oath as 19th Governor of Karnataka

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಜ್ಯಪಾಲ ವಜುಭಾಯಿ ವಾಲಾ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

Siddaramaiah greets Thaawarchand Gehlot

ಮಧ್ಯಪ್ರದೇಶ ಮೂಲದ ಥಾವರ್ ಚಂದ್ ಗೆಹ್ಲೋಟ್‌ ರಾಜ್ಯಸಭಾ ಸದಸ್ಯರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರಾಗಿದ್ದರು. ನಾಲ್ಕು ಬಾರಿ ಸಂಸದರಾಗಿ ಸಹ ಆಯ್ಕೆಯಾಗಿದ್ದಾರೆ.

ಈ ಮುನ್ನ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ರಾಷ್ಟ್ರಪತಿ ಅವರಿಂದ ಸ್ವೀಕೃತವಾದ ನೇಮಕಾತಿ ಪತ್ರವನ್ನು ವಾಚಿಸಿದರು.

ಇಲ್ಲಿ ಓದಿ: ಕೇಂದ್ರ ಸಚಿವ ತವಾರ್ಚಂದ್ ಗೆಹ್ಲೋಟ್ ಕರ್ನಾಟಕ ರಾಜ್ಯಪಾಲರನ್ನಾಗಿ ನೇಮಕ

ಇಲ್ಲಿ ಓದಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಜುಲೈ 11ರಂದು ತಾವರ್‌ಚಂದ್ ಗೆಹ್ಲೋಟ್‌ ಪ್ರಮಾಣ ವಚನ

ಇಲ್ಲಿ ಓದಿ: ಬೆಂಗಳೂರಿಗೆ ಆಗಮಿಸಿದ ನೂತನ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಮತ್ತು ಡಾ ಸಿ ಎನ್ ಅಶ್ವಥನಾರಾಯಣ, ರಾಜ್ಯ ಸಚಿವ ಸಂಪುಟದ ಸದಸ್ಯರಾದ ಕೆ ಎಸ್ ಈಶ್ವರಪ್ಪ, ಆರ್. ಅಶೋಕ್, ಎಸವರಾಜ ಬೊಮ್ಮಾಯಿ, ಎಸ್ ಸುರೇಶ್ ಕುಮಾರ್, ವಿ. ಸೋಮಣ್ಣ, ಎಸ್. ಟಿ. ಸೋಮಶೇಖರ್, ಮುರುಗೇಶ್ ಆರ್ ನಿರಾಣಿ, ಡಾ ಕೆ ಸುಧಾಕರ್, ಸಿ. ಪಿ. ಯೋಗೇಶ್ವರ್ ಮತ್ತು ಆರ್. ಶಂಕರ್, ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆಯ ರಾಜ್ಯ ಸಚಿವ ರಾಮ್‍ದಾಸ್ ಅಠಾವಲೆ, ಲೋಕಸಭಾ ಸದಸಸ್ಯರಾದ ಡಿ. ವಿ. ಸದಾನಂದ ಗೌಡ, ಸುಮಲತಾ ಮತ್ತು ಪಿ ಸಿ ಮೋಹನ್, ರಾಜ್ಯ ಸಭಾಸದಸ್ಯ ಕೆ ಸಿ ರಾಮಮೂರ್ತಿ, ರಾಜ್ಯ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಸಭೆಯ ಪತ್ರಿಪಕ್ಷ ನಾಯಕ ಎಂ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಲೋಕಾಯುಕ್ತ ಪಿ ವಿಶ್ವನಾಥ ಶೆಟ್ಟಿ, ರಾಜ್ಯ ವಿಧಾನಸಭಾ ಸದಸ್ಯ ಎ. ಎಸ್. ನಡಳ್ಳಿ, ರಾಜ್ಯ ವಿಧಾನ ಪರಿಷತ್ ಸದಸ್ಯ ಕೆ ಗೋವಿಂದ ರಾಜ್, ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತ ಎನ್ ಜಿ ಶ್ರೀನಿವಾಸ್ ರಾಜ್ಯ ಆರಕ್ಷಕ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪಿ ಹೇಮಲತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅವರೂ ಸೇರಿದಂತೆ ಹಲವು ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.

LEAVE A REPLY

Please enter your comment!
Please enter your name here