Home ಬೆಂಗಳೂರು ನಗರ Nikhil Kumaraswamy | ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ:...

Nikhil Kumaraswamy | ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ: ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ

91
0

ಬೆಂಗಳೂರು:

ಹುಲಿ ಉಗುರು ಧರಿಸಿರೋ ಬಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ‘X’ ಮೂಲಕ ತಮ್ಮ ಸ್ಪಷ್ಟನೆಯಲ್ಲಿ, “ತಮ್ಮ ಮದುವೆ ಸಮಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿದ್ದರು ಎಂದು ಕೆಲ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಇದು ಸತ್ಯಕ್ಕೆ ದೂರ. ವನ್ಯಜೀವಿ ಸಂರಕ್ಷಣಾ ಕಾಯ್ದೆ, ಅದರ ಗಂಭೀರತೆ ಬಗ್ಗೆ ನನಗೆ ಖಂಡಿತಾ ಅರಿವಿದೆ,” ಎಂದಿದ್ದಾರೆ.

1000838344

“ನಾನು ಧರಿಸಿದ್ದ ಹುಲಿ ಉಗುರು ಮಾದರಿಯ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ಅದನ್ನು ನನ್ನ ಮದುವೆ ಸಮಯದಲ್ಲಿ ಉಡುಗೋರೆ ನೀಡಿದ್ದು. ಅದು ಈಗಲೂ ನನ್ನ ಬಳಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಬಹುದು. ದಯಮಾಡಿ ಯಾರೂ ಸತ್ಯಕ್ಕೆ ದೂರವಾದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ವಿನಂತಿ ಮಾಡಿಕೊಳ್ಳುತ್ತೇನೆ,” ಎಂದು ಹೇಳಿದರು.

LEAVE A REPLY

Please enter your comment!
Please enter your name here