There is no confusion about Grilakshmi, Griha Jyoti Yojana: Chief Minister Siddaramaiah
ಬೆಂಗಳೂರು:
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಯ ಕುರಿತಂತೆ ಯಾವ ಗೊಂದಲವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ತಮ್ಮ ಸ್ವಕ್ಷೇತ್ರ ಮೈಸೂರಿಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
ನುಡಿದಂತೆ ನಡೆಯುವವರು: ಗ್ಯಾರಂಟಿ ಯೋಜನೆಗಳ ಬಗ್ಗೆ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು, ನಾವು ನುಡಿದಂತೆ ನಡೆಯುವವರು ಎಂದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಭರವಸೆಗಳನ್ನು ನೀಡಿದ್ದರು.ಅವುಗಳಲ್ಲಿ ಎಷ್ಟು ಈಡೇರಿವೆ ಎಂಬ ಬಗ್ಗೆ ಎಷ್ಟು ಚರ್ಚೆಯಾಗಿದೆ ಎಂದು ಪ್ರಶ್ನಿಸಿದರು.
ಇಂದು ಮೈಸೂರಿಗೆ ತೆರಳಿ ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ತಿಳಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು.
