Home ಬೆಂಗಳೂರು ನಗರ ಅಕ್ಟೋಬರ್ 3ರಂದು ಹಸಿರು ಮಾರ್ಗದಲ್ಲಿ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ರವರೆಗೆ ಮೆಟ್ರೋ ರೈಲು...

ಅಕ್ಟೋಬರ್ 3ರಂದು ಹಸಿರು ಮಾರ್ಗದಲ್ಲಿ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ರವರೆಗೆ ಮೆಟ್ರೋ ರೈಲು ಸೇವೆ ಇರಲ್ಲ

8
0

ಬೆಂಗಳೂರು: ಅಕ್ಟೋಬರ್ 3ರಂದು ಹಸಿರು ಮಾರ್ಗದಲ್ಲಿ ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಅ. 3ರ ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 2:00 ರವರೆಗೆ ನಾಗಸಂದ್ರ ಮತ್ತು ಮಾದವಾ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಈ ಅವಧಿಯಲ್ಲಿ ನಾಗಸಂದ್ರ ಮತ್ತು ಪೀಣ್ಯ ಇಂಡಸ್ಟ್ರಿ ನಿಲ್ದಾಣಗಳ ನಡುವೆ ರೈಲು ಸಂಚಾರ ಇರುವುದಿಲ್ಲ. ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ನಾಗಸಂದ್ರ ಮತ್ತು ಮಾದವಾರ ನಿಲ್ದಾಣಗಳ ನಡುವಿನ ಹೊಸ ಮಾರ್ಗವನ್ನು ಮೆಟ್ರೋ ರೈಲ್ವೆ ಸುರಕ್ಷತ ಆಯುಕ್ತರಿಂದ ಶಾಸನಬದ್ಧ ಸುರಕ್ಷತಾ ತಪಾಸಣೆ ನಡೆಸುತ್ತಿರುವುದರಿಂದ, ದಿನಾಂಕ 3ನೇ ಅಕ್ಟೋಬರ್ 2024 ರಂದು ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಕಾರ್ಯಾಚರಣೆಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಬದಲಾವಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಗುರುವಾರ ನಾಗಸಂದ್ರ ಮತ್ತು ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವಾಣಿಜ್ಯ ಸೇವೆ ಲಭ್ಯವಿರುವುದಿಲ್ಲ ಎಂದು ಬಿಎಂಆರ್​ಸಿಎಲ್​ ಮಾಹಿತಿ ನೀಡಿದೆ.

ಈ ಅವಧಿಯಲ್ಲಿ, ಪೀಣ್ಯ ಇಂಡಸ್ಟ್ರಿ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಎಂದಿನಂತೆ ಲಭ್ಯವಿರುತ್ತದೆ. ಬೆಳಿಗ್ಗೆ 9.00 ಗಂಟೆಗೆ ರೇಷ್ಮೆ ಸಂಸ್ಥೆಯಿಂದ ಹೊರಡುವ ಕೊನೆಯ ರೈಲು ನಾಗಸಂದ್ರ ನಿಲ್ದಾಣಕ್ಕೆ ತಲುಪಲಿದೆ. ನೇರಳೆ ಮಾರ್ಗದ ಮೆಟ್ರೋ ರೈಲು ಕಾರ್ಯಾಚರಣೆಯಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಲು ಮತ್ತು ಸಹಕರಿಸಲು ಕೋರಿದೆ.

LEAVE A REPLY

Please enter your comment!
Please enter your name here