ಸಕಲೇಶಪುರ/ಹಾಸನ:
ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಕಲೇಶಪುರ ತಾಲೂಕಿನ ಯಸಳೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು.
ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಮೃತ ಬಾಲಕಿಯ ಸಂಬಂಧಿಕರೆಂದು ಹೇಳಲಾದ 23 ವರ್ಷದ ಲೋಕೇಶ್ ಮತ್ತು ಇನ್ನಿಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ಬಾಲಕಿ ಒಂದು ದಿನ ಅವರೊಂದಿಗೆ ಕಳೆದು ಮನೆಗೆ ಹಿಂದಿರುಗಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆದರೆ ಆಕೆಯ ಮೇಲೆ ಯಾವುದೇ ಲೈಂಗಿಕ ಕಿರುಕುಳದ ಲಕ್ಷಣಗಳಿಲ್ಲ ಎಂದು ಮರಣೋತ್ತರ ವರದಿ ಹೇಳುತ್ತದೆ ಎಂದು ಎಸ್ಪಿ ಹೇಳಿದ್ದಾರೆ.
ಮೃತ ಪೋಷಕರ ಪ್ರಕಾರ, ತಮ್ಮ ಮಗಳು ನಿಗೂಢ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.