ರಾಮನಗರ:
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು ಕಾರು ಡಿಕ್ಕಿಯಾಗಿ ಮೂವರು ಬೈಕ್ ಸವಾರರು ದುರ್ಮರಣ ಹೊಂದಿದ್ದಾರೆ.
ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಒಂದೇ ಬೈಕ್ ನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ರಸ್ತೆ ಪಕ್ಕ ಕೆಟ್ಟು ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ನೆಲಕ್ಕೆ ಅಪ್ಪಳಿಸಿದ್ದಾರೆ. ಈ ವೇಳೆ ಮತ್ತೊಂದು ಕಾರು ಅವರ ಮೇಲೆ ಹರಿದು ಮೃತಪಟ್ಟಿದ್ದಾರೆ.
ಅಪಘಾತದ ಸ್ಥಳಕ್ಕೆ ಆಗಮಿಸಿದ ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.