Home ರಾಮನಗರ ಕುರಿ ತೊಳೆಯಲು ಹೋಗಿದ್ದಾಗ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ಕುರಿ ತೊಳೆಯಲು ಹೋಗಿದ್ದಾಗ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

222
0
Three drowned in lake while washing sheep in Karnataka

ರಾಮನಗರ:

ರಾಮನಗರ ‌ಜಿಲ್ಲೆ ಮಾಗಡಿ ತಾಲೂಕಿನ ಮುತ್ತ ಸಾಗರ ಗ್ರಾಮದಲ್ಲಿ ಕುರಿ ಮೈ ತೊಳೆಯಲು ಕೆರೆಗೆ ಇಳಿದಿದ್ದ ಒಂದೇ ಕುಟುಂಬದ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ಗೊಲ್ಲರಹಟ್ಟಿ ಗ್ರಾಮದ ಒಂದೇ ಕುಟುಂಬದ 35 ವರ್ಷದ ಜ್ಯೋತಿ, 30 ವರ್ಷದ ನಾಗರಾಜು ಮತ್ತು 22 ವರ್ಷದ ಲಕ್ಷ್ಮೀ ಎಂದು ಗುರುತಿಸಲಾಗಿದೆ. ಕುರಿ ತೊಳೆಯುತ್ತಿದ್ದಾಗ ಯಾರೋ ಒಬ್ಬರು ಮುಳುಗಿದ್ದು ಅವರನ್ನು ರಕ್ಷಿಸಲು ಮುಂದಾದಾಗ ಈ ದುರಂತ ನಡೆದಿದೆ ಎನ್ನಲಾಗಿದೆ.

Three drowned in lake while washing sheep in Karnataka

ಸುದ್ದಿ ತಿಳಿದ ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು ಕಾರ್ಯಾಚರಣೆಗೆ ಮುಂದಾದರು. ಈ ವೇಳೆ ಇಬ್ಬರ ಮೃತದೇಹಗಳನ್ನು ಹೊರ ತೆಗೆದಿದ್ದು ಮತ್ತೊಬ್ಬರ ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here