ಹುಬ್ಬಳ್ಳಿ:
ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ.
ಮೃತರನ್ನು ಹುಬ್ಬಳ್ಳಿ ನಗರದ ನಿವಾಸಿಗಳಾದ ಮೊಹಮ್ಮದ್ ಇಶಾನ್, ಮೊಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.
ಆರು ಜನ ಸ್ನೇಹಿತರು ಕಾರಿನಲ್ಲಿ ದೇವರ ದರ್ಶನಕ್ಕೆಂದು ಕಾರವಾರಕ್ಕೆ ತೆರಳುತ್ತಿದ್ದರು. ಈ ವೇಳೆ ಕಲಘಟಗಿ ಬಳಿ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಕಿಮ್ಸ್ ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.