Home Uncategorized Tiger Attack in Kodagu: ಕೊಡಗಿನಲ್ಲಿ ಹುಲಿ ದಾಳಿಗೆ 12 ವರ್ಷದ ಬಾಲಕ ಸಾವು

Tiger Attack in Kodagu: ಕೊಡಗಿನಲ್ಲಿ ಹುಲಿ ದಾಳಿಗೆ 12 ವರ್ಷದ ಬಾಲಕ ಸಾವು

21
0
Advertisement
bengaluru

ಹುಲಿ ದಾಳಿಗೆ 12 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ಭಾನುವಾರ ನಡೆದಿದೆ. ಕೊಡಗು: ಹುಲಿ ದಾಳಿಗೆ 12 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕೊಡಗಿನಲ್ಲಿ ಭಾನುವಾರ ನಡೆದಿದೆ.

ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 12 ವರ್ಷದ ಬಾಲಕನ ಮೇಲೆ ಹುಲಿ ದಾಳಿ (Tiger Attack) ಮಾಡಿದೆ. 

A 12-year-old boy has been killed in a tiger attack in #Kodagu. Incident reported inside a private estate at K Badaga village in South Kodagu. @XpressBengaluru
— Prajna G R (@prajna_gr) February 12, 2023

ಹುಲಿ ದಾಳಿಯಿಂದಾಗಿ ಸ್ಥಳದಲ್ಲೇ ಬಾಲಕ ಸಾವನ್ನಪ್ಪಿದ್ದು, ಮೃತ ಬಾಲಕನನ್ನು ಚೇತನ್ (12 ವರ್ಷ) ಎಂದು ಗುರುತಿಸಲಾಗಿದೆ. ದಾಳಿ ಮಾಡಿದ ಹುಲಿ ಬಾಲಕನನ್ನು ಕೊಂದು ತೊಡೆ ಭಾಗವನ್ನು ತಿಂದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

bengaluru bengaluru

ಇದನ್ನೂ ಓದಿ: ಕುಶಾಲನಗರ: ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವು

ಸಂಜೆ ಎಸ್ಟೇಟ್ ಆವರಣದಲ್ಲಿ ಆಟವಾಡುತ್ತಿದ್ದ ವೇಳೆ ಹುಲಿ ದಾಳಿ ನಡೆಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವಿರಾಜಪೇಟೆ ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಶವವನ್ನು ಗೋಣಿಕೊಪ್ಪಲು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಯ ನಂತರ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಿದ್ದರಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.
 


bengaluru

LEAVE A REPLY

Please enter your comment!
Please enter your name here