ಬೆಂಗಳೂರು:
ಮಂಗಳವಾರ ನಸುಕಿನಿಂದಲೇ ರಾಜಧಾನಿ ಬೆಂಗಳೂರಿನ ಹಲವು ಕಡೆ ಧಾರಾಕಾರ ಮತ್ತು ಇನ್ನು ಕೆಲವು ಪ್ರದೇಶಗಳಲ್ಲಿ ಜಿಟಿಜಿಟಿ ಮಳೆ ಸುರಿಯುತ್ತಿದ್ದು ಶಾಲಾ ಕಾಲೇಜುಗಳಿಗೆ ತೆರಳುವವರಿಗೆ, ಕಚೇರಿ ಕೆಲಸ ಕಾರ್ಯಗಳಿಗೆ ಹೋಗುವವರಿಗೆ ಸಂಚಾರಕ್ಕೆ ಅಡ್ಡಿಯುಂಟಾಯಿತು.
ಬೆಂಗಳೂರಿನ ಮೆಜೆಸ್ಟಿಕ್, ಶಾಂತಿನಗರ, ವಿಧಾನಸೌಧ, ಕಾರ್ಪೊರೇಷನ್ ಸರ್ಕಲ್, ಶಿವಾಜಿನಗರ, ಕೆ.ಆರ್.ಮಾರ್ಕೆಟ್, ಮೈಸೂರು ರಸ್ತೆ, ಮಾಗಡಿ ರಸ್ತೆ, ವಿಜಯನಗರ, ಜಯನಗರ, ಶಿವಾನಂದ ಸರ್ಕಲ್, ಮೇಖ್ರಿ ಸರ್ಕಲ್, ರಾಜಾಜಿನಗರ, ಯಶವಂತಪುರ, ಚಂದ್ರಾಲೇಔಟ್, ನಂದಿನಿ ಲೇಔಟ್, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ, ಬನಶಂಕರಿ, ಬಸವನಗುಡಿ, ಹೆಬ್ಬಾಳ, ಯಲಹಂಕ, ಶ್ರೀನಗರ, ಆರ್.ಟಿ.ನಗರ ಸೇರಿ ಹಲವೆಡೆ ಮಳೆಯಾಗಿದೆ.
ಬೆಂಗಳೂರಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆ ಮನ್ಸೂಚನೆ ಸಿಕ್ಕಿದ್ದು, ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.