ಬೆಂಗಳೂರು:
ರಾಜಧಾನಿ ಬೆಂಗಳೂರಿನ ಹಲವು ಕಡೆ ಗುಡುಗು ಸಹಿ ಧಾರಾಕಾರ ಮಳೆಯಾಗಿದೆ.
ಕೋರಮಂಗಲ, ವಿವೇಕ ನಗರ, ಎಚ್.ಎಸ್.ಆರ್ ಲೇಔಟ್, ಬೆಳ್ಳಂದೂರು, ವರ್ತೂರು, ಸರ್ಜಾಪುರ, ಮಾರತ್ಹಳ್ಳಿ, ಕಾಡುಗೋಡಿ, ವೈಟ್ ಫೀಲ್ಡ್, ಕೆ.ಆರ್.ಪುರಂ, ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೇಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗಿದೆ.
ದಿಢೀರ್ ಮಳೆಗೆ ಬೆಂಗಳೂರಿನ ರಸ್ತೆಗಳು ಜಲಾವೃತಗೊಂಡಿದ್ದು, ಕೆಲವು ಕಡೆ ಟ್ರಾಫಿಕ್ ಜಾಮ್ ಉಂಟಾಗಿದೆ.
