Home Uncategorized Toyota Innova Hycross: ಭರ್ಜರಿ ಮೈಲೇಜ್ ನೀಡುವ ಟೊಯೊಟಾ ಇನೋವಾ ಹೈಕ್ರಾಸ್ ಅನಾವರಣ

Toyota Innova Hycross: ಭರ್ಜರಿ ಮೈಲೇಜ್ ನೀಡುವ ಟೊಯೊಟಾ ಇನೋವಾ ಹೈಕ್ರಾಸ್ ಅನಾವರಣ

11
0

ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಅಗ್ರಸ್ಥಾನದಲ್ಲಿರುವ ಟೊಯೊಟಾ(Toyota) ಕಂಪನಿಯು ತನ್ನ ಬಹುನೀರಿಕ್ಷಿತ ಇನೋವಾ ಹೈಕ್ರಾಸ್(Innova Hycross) ಹೊಸ ಕಾರನ್ನು ಭಾರತದಲ್ಲಿ ಅನಾವರಣಗೊಳಿಸಿದೆ. ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಇನೋವಾ ಕ್ರಿಸ್ಟಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಮತ್ತು ಸುಧಾರಿತ ಎಂಜಿನ್ ಆಯ್ಕೆಯೊಂದಿಗೆ ಅಭಿವೃದ್ದಿಗೊಂಡಿದ್ದು, ಎಂಪಿವಿ ಕಾರು ಮಾರಾಟದಲ್ಲಿ ಮತ್ತೊಂದು ಹಂತದ ಬದಲಾವಣೆಯ ನೀರಿಕ್ಷೆಯಲ್ಲಿದೆ.

ಟಿಎನ್ ಜಿಸಿ-ಎ ಪ್ಲ್ಯಾಟ್ ಫಾರ್ಮ್ ಅಡಿ ನಿರ್ಮಾಣವಾಗಿರುವ ಹೊಸ ಇನೋವಾ ಹೈಕ್ರಾಸ್ ಹೊಸ ಕಾರು ಮೂರನೇ ತಲೆಮಾರಿನ ವೈಶಿಷ್ಟ್ಯತೆಗಳನ್ನು ಹೊಂದಿದ್ದು, ವಿನೂತನ ವಿನ್ಯಾಸದ ಜೊತೆಗೆ ಹಲವಾರು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದೆ.

ಎಂಜಿನ್ ಆಯ್ಕೆ ಮತ್ತು ಮೈಲೇಜ್

ಹೊಸ ಇನೋವಾ ಹೈಕ್ರಾಸ್ ಕಾರು ಮಾದರಿಯು ಪ್ರಮುಖ ಎಂಜಿನ್ ಆಯ್ಕೆಗಳನ್ನು ಹೊಂದಿದ್ದು, 2.0 ಲೀಟರ್ ಸಾಮಾನ್ಯ ಪೆಟ್ರೋಲ್ ಜೊತೆಗೆ 2.0 ಲೀಟರ್ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿರಲಿದೆ. 2.0 ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಫೋರ್ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯು 172 ಹಾರ್ಸ್ ಪವರ್ ಮತ್ತು 205 ಎನ್ಎಂ ಟಾರ್ಕ್ ಉತ್ಪಾದಿಸಿದರೆ ಹೈಬ್ರಿಡ್ ಮಾದರಿಯು ಸಿವಿಟಿ ಗೇರ್ ಬಾಕ್ಸ್ ನೊಂದಿಗೆ 150 ಹಾರ್ಸ್ ಪವರ್, 187 ಎನ್ಎಂ ಟಾರ್ಕ್‌ ಉತ್ಪಾದಿಸುತ್ತದೆ.

2.0 ಲೀಟರ್ ಆಟ್ಕಿನ್ಸ್ ಸೈಕಲ್ ಪೆಟ್ರೋಲ್ ಹೈಬ್ರಿಡ್ ಎಂಜಿನ್ ಮಾದರಿಯು ಫ್ರಂಟ್ ವ್ಹೀಲ್ ಡ್ರೈವ್ ಸಿಸ್ಟಂ ಜೊತೆ ಸೆಲ್ಪ್ ಡ್ರೈವ್ ಚಾರ್ಜಿಂಗ್ ವೈಶಿಷ್ಟ್ಯತೆ ಹೊಂದಿದ್ದು, ಇದು ಪ್ರತಿ ಲೀಟರ್ ಪೆಟ್ರೋಲ್ ಗೆ ಗರಿಷ್ಠ 21 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ. ಒಟ್ಟಾರೆ ಹೊಸ ಕಾರಿನ ಹೈಬ್ರಿಡ್ ಮಾದರಿಯಲ್ಲಿ ಒಂದು ಬಾರಿ ಪೂರ್ಣ ಪೆಟ್ರೋಲ್ ಟ್ಯಾಂಕ್ ಜೊತೆಗೆ ಎಲೆಕ್ಟ್ರಿಕ್ ಎಂಜಿನ್ ಮೂಲಕ 1,097 ಕಿ.ಮೀ ಚಾಲನೆ ಮಾಡಬಹುದಾಗಿದೆ.

ಡಿಸೈನ್ ಮತ್ತು ಫೀಚರ್ಸ್

ಹೊಸ ಇನೋವಾ ಹೈಕ್ರಾಸ್ ಕಾರು ಇನೋವಾ ಕ್ರಿಸ್ಟಾ ಕಾರಿಗಿಂತಲೂ ಹೆಚ್ಚು ಸುಧಾರಿತ ವಿನ್ಯಾಸ ಅಂಶಗಳನ್ನು ಒಳಗೊಂಡಿದ್ದು, ಎಸ್ ಯುವಿ ಲುಕ್ ನೊಂದಿಗೆ ಗ್ಲಾಸ್ ಬ್ಲ್ಯಾಕ್ ಹೊಂದಿರುವ ಹೆಕ್ಸಾಗೊನಲ್, ಸ್ಪೋರ್ಟಿ ಫಾಗ್ ಲ್ಯಾಂಪ್, ಎಲ್ಇಡಿ ಟೈಲ್ ಲ್ಯಾಂಪ್, ಸೇರಿದಂತೆ 18 ಇಂಚಿನ 10-ಸ್ಪೋಕ್ ಅಲಾಯ್ ವ್ಹೀಲ್ ಸೇರಿದಂತೆ ಹಲವು ಹೊಸ ಬದಲಾವಣೆಗಳನ್ನು ಪಡೆದುಕೊಂಡಿದೆ. ಹಾಗೆಯೇ ಹೊಸ ಕಾರಿನಲ್ಲಿ ಮೊದಲ ಬಾರಿಗೆ ಎಲೆಕ್ಟ್ರಿಕ್ ಸನ್ ರೂಫ್, ಸುಧಾರಿತ 10.1 ಇಂಚಿನ ಇನ್ಪೋಟೈನ್ ಮೆಂಟ್ ಸಿಸ್ಟಂ, 4.2 ಇಂಚಿನ ಮಲ್ಟಿ ಇನ್ ಫಾರ್ಮೆಷನ್ ಡಿಸ್ಪೇ, ಡ್ಯುಯಲ್ ಟೋನ್ ಥೀಮ್ ಹೊಂದಿರುವ ಡಾರ್ಕ್ ಚೆಸ್ಟ್ ನಟ್ ಸೀಟುಗಳು ಮತ್ತು ಹಲವು ಕಾರ್ ಕನೆಕ್ಟ್ ಸೌಲಭ್ಯಗಳನ್ನು ನೀಡಲಾಗಿದ್ದು, ಇದರೊಂದಿಗೆ ಗರಿಷ್ಠ ಸುರಕ್ಷತೆಗಾಗಿ ಎಡಿಎಎಸ್(ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ) ಸೌಲಭ್ಯವನ್ನು ಜೋಡಣೆ ಮಾಡಲಾಗಿದೆ.

ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಲೇನ್ ಡಿಪಾರ್ಚರ್ ವಾರ್ನಿಂಗ್ ಮತ್ತು ಬ್ಲೈಂಡ್ ಸ್ಪಾಟ್ ಮಾನಿಟರಿಂಗ್ ಹೊಂದಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಸಿಸ್ಟಂ ಜೊತೆಗೆ ಸ್ಟ್ಯಾಂಡರ್ಡ್ ಮಾದರಿಗಳಿಗೂ ಅನ್ವಯಿಸುವಂತೆ 6 ಏರ್ ಬ್ಯಾಗ್, ಎಬಿಎಸ್ ಜೊತೆಗೆ ಇಬಿಡಿ, ಟ್ರಾಕ್ಷನ್ ಕಂಟ್ರೋಲ್, ಇಎಸ್ ಪಿ ಸೌಲಭ್ಯಗಳಿದ್ದು, ಆಂಬಿಯೆಂಟ್ ಲೈಟಿಂಗ್, ಫ್ರಂಟ್ ವೆಂಟಿಲೆಟೆಡ್ ಲೆದರ್ ಆಸನಗಳು, ಒಟ್ಟೊಮನ್ ವೈಶಿಷ್ಟ್ಯತೆ ಹೊಂದಿರುವ ಮಧ್ಯದಲ್ಲಿರುವ ಆಸನಗಳು ಗಮನಸೆಳೆಯುತ್ತವೆ.

ಕಾರಿನ ಉದ್ದಳತೆ

ಹೊಸ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೆಚ್ಚಿನ ಉದ್ದಳತೆಯೊಂದಿಗೆ ಉತ್ತಮ ಕ್ಯಾಬಿನ್ ಹೊಂದಿದ್ದು, ಹೊಸ ಕಾರು 4,755 ಎಂಎಂ ಉದ್ದ, 1,850 ಎಂಎಂ ಅಗಲ, 1,795 ಎಂಎಂ ಎತ್ತರ, 2,850 ಎಂಎಂ ವ್ಹೀಲ್ ಬೆಸ್ ಮತ್ತು 185 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿರಲಿದೆ.

ಬಿಡುಗಡೆ ಅವಧಿ

ಹೊಸ ಕಾರನ್ನ ಸದ್ಯಕ್ಕೆ ಅನಾವರಣಗೊಳಿಸಿರುವ ಟೊಯೊಟಾ ಕಂಪನಿಯು ಮುಂಬರುವ 2023ರ ಜನವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್ ಪೋದಲ್ಲಿ ಅಧಿಕೃತ ಬೆಲೆ ಮಾಹಿತಿ ಹಂಚಿಕೊಳ್ಳಲಿದ್ದು, ಇದು ದೆಹಲಿ ಎಕ್ಸ್ ಶೋರೂಂ ಪ್ರಕಾರ ಆರಂಭಿಕವಾಗಿ ರೂ. 20 ಲಕ್ಷದಿಂದ ಹೈ ಎಂಡ್ ಮಾದರಿಯು ರೂ. 30 ಲಕ್ಷ ಬೆಲೆ ಹೊಂದಿರಬಹುದೆಂದು ನೀರಿಕ್ಷೆ ಮಾಡಲಾಗಿದೆ.

LEAVE A REPLY

Please enter your comment!
Please enter your name here