ಚಿತ್ರದುರ್ಗ:
ಟ್ರ್ಯಾಕ್ಟರ್ ವೊಂದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರೇಖಲಗೆರೆ ಎಂಬಲ್ಲಿ ಸಂಭವಿಸಿದೆ.
ಬಸಣ್ಣ (23), ಶಶಿಕುಮಾರ್ (25) ಮೃತ ದುರ್ದೈವಿಗಳು. ಟ್ರ್ಯಾಕ್ಟರ್ ನಲ್ಲಿ ಇಟ್ಟಿಗೆ ಸಾಗಿಸಲಾಗುತ್ತಿತ್ತು ಎಂದು ತಿಳಿದು ಬಂದಿದೆ.
ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.