Home ಬೆಂಗಳೂರು ನಗರ Traffic Violation in Bengaluru | 99 ಬಾರಿ ಟ್ರಾಫಿಕ್ ನಿಯಮ ಉಲ್ಲಂಘನೆ: ರೂ. 56,000...

Traffic Violation in Bengaluru | 99 ಬಾರಿ ಟ್ರಾಫಿಕ್ ನಿಯಮ ಉಲ್ಲಂಘನೆ: ರೂ. 56,000 ದಂಡ

124
0
Traffic Violation in Bengaluru | 99 times traffic violation, Rs 56,000 fine
Traffic Violation in Bengaluru | 99 times traffic violation, Rs 56,000 fine

ಬೆಂಗಳೂರು:

99 ಬಾರಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದ ಒಬ್ಬರು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ರೂ. 56,000 ದಂಡವನ್ನು ಹಾಕಿದ್ದಾರೆ. ಸ್ಕೂಟರ್ ವಶಕ್ಕೆ ಪಡೆದಿರುವ ಪೊಲೀಸರು, ದಂಡ ಪಾವತಿಸಲು ಎರಡು ತಿಂಗಳ ಕಾಲಾವಕಾಶ ನೀಡಿದ್ದಾರೆ.

ನಿಯಮ ಉಲ್ಲಂಘಿಸಿದ್ದಕ್ಕಾಗಿ ವಾಹನವನ್ನು ವಶಪಡಿಸಿಕೊಂಡಿದ್ದೇವೆ. ಅವರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಶಿಫಾರಸು ಮಾಡಲಾಗಿದೆ ಎಂದು ಸಂಚಾರ (ದಕ್ಷಿಣ) ಉಪ ಪೊಲೀಸ್ ಆಯುಕ್ತ ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ.

56,000 ರೂ. ಪಾವತಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ಎರಡು ತಿಂಗಳಲ್ಲಿ ದಂಡ ಪಾವತಿಸುವಲ್ಲಿ ವಿಫಲವಾದರೆ, ಅವರ ವಾಹನವನ್ನು ಹರಾಜು ಮಾಡಲಾಗುವುದು ಎಂದು ಮೈಕೋ ಲೇಔಟ್ ಪೊಲೀಸರು ತಿಳಿಸಿದ್ದಾರೆ.

ನಿಯಮ ಉಲ್ಲಂಘಿಸಿದ ಬಿಳೇಕಹಳ್ಳಿ ನಿವಾಸಿ ಎಂದು ಗುರುತಿಸಲಾಗಿದೆ. ಸಂಚಾರ ಉಲ್ಲಂಘನೆಗಳಲ್ಲಿ ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸಿದ 54 ಪ್ರಕರಣಗಳು, 34 ದೋಷಪೂರಿತ ನಂಬರ್ ಪ್ಲೇಟ್ ಪ್ರಕರಣಗಳು, ವಾಹನ ಚಲಾಯಿಸುವಾಗ ಮೊಬೈಲ್ ಬಳಸಿದ ಐದು ಪ್ರಕರಣಗಳು, ನೋ ಎಂಟ್ರಿ ಮೂರು ಮತ್ತು ನೋ ಪಾರ್ಕಿಂಗ್, ಜೀಬ್ರಾ ಕ್ರಾಸಿಂಗ್‌ನಲ್ಲಿ ಪಾರ್ಕಿಂಗ್ ಮತ್ತು ಟ್ರಿಪಲ್ ರೈಡಿಂಗ್ ಸೇರಿದಂತೆ ತಲಾ ಒಂದು ಪ್ರಕರಣಗಳು ಸೇರಿವೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ಐಪಿಸಿ ಮತ್ತು ಭಾರತೀಯ ಮೋಟಾರ್ ವಾಹನ (ಐಎಂವಿ) ಕಾಯ್ದೆಯಡಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here