ಬೆಳಗಾವಿ:
ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರ ಪ್ರತಿಭಟನೆ 2ನೇ ದಿನವು ಮುಂದುವರಿದಿದೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ಕರ್ತವ್ಯಕ್ಕೆ ಗೈರಾಗಿ ಪ್ರತಿಭಟನೆಗೆ ಹಾಜರಾದ ನೌಕರರು, ತಲೆ ಮೇಲೆ ಚಪ್ಪಲಿಗಳನ್ನು ಇಟ್ಟುಕೊಂಡು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೇಡಿಕೆ ಈಡೇರಿಸುವವರೆಗೂ ತಾವು ಪ್ರತಿಭಟನೆ ಕೈಬಿಡುವುದಿಲ್ಲ ಎಂದು ನೌಕರರು ಪಟ್ಟು ಹಿಡಿದಿದ್ದಾರೆ.
ಅಲ್ಲದೇ, ಬಸ್ಸು ನಿಲ್ದಾಣದಲ್ಲೇ ಉಪಾಹಾರ ಸಿದ್ಧಪಡಿಸಲು ತಯಾರಿ ನಡೆಸಿದರು.
ಇನ್ನು, ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ನಿಲ್ದಾಣದತ್ತ ಮುಖಮಾಡುತ್ತಿಲ್ಲ. ಬದಲಾಗಿ ಮಹಾರಾಷ್ಟ್ರದ ಬಸ್ಸುಗಳತ್ತ ಪ್ರಯಾಣಿಕರು ಮುಖಮಾಡಿದ್ದು, ಬಸ್ಸುಗಳು ತುಂಬಿತುಳುಕುತ್ತಿವೆ.