Home ಬೆಂಗಳೂರು ನಗರ ತುಮಕೂರು ಜಿಲ್ಲಾ ವಾರ್ತಾಧಿಕಾರಿ ಡಿ. ಮಂಜುನಾಥ್ ನಿಧನ

ತುಮಕೂರು ಜಿಲ್ಲಾ ವಾರ್ತಾಧಿಕಾರಿ ಡಿ. ಮಂಜುನಾಥ್ ನಿಧನ

60
0
Advertisement
bengaluru

ಬೆಂಗಳೂರು:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ತುಮಕೂರು ಜಿಲ್ಲಾ ಹಿರಿಯ ಸಹಾಯಕ ನಿರ್ದೇಶಕ ಡಿ.ಮಂಜುನಾಥ್ ಅವರು ಉಸಿರಾಟದ ಸಮಸ್ಯೆಯಿಂದ ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದಾರೆ. ಅವರಿಗೆ ನಲವತ್ತು ವರ್ಷ ವಯಸ್ಸಾಗಿತ್ತು

ಮೂಲತಃ ದೊಡ್ಡಬಳ್ಳಾಪುರದ ನೆಲ್ಲುಕುಂಟೆ ಗ್ರಾಮದ ಮಂಜುನಾಥ್ ಅವರು ಕಳೆದ ಐದು ವರ್ಷಗಳಿಂದ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಈ ಹಿಂದೆ ಸಹಕಾರ ಇಲಾಖೆ ಹಾಗೂ ಪತ್ರಿಕೋದ್ಯಮದಲ್ಲಿಯೂ ಸೇವೆ ಸಲ್ಲಿಸಿದ್ದರು.

bengaluru bengaluru

ಇವರು ಪತ್ನಿ , ಒಂದು ವರ್ಷದ ಮಗ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ವಾರ್ತಾ ಸಚಿವ ಸಿ.ಸಿ. ಪಾಟೀಲ್ ಅವರು ಮಂಜುನಾಥ್ ಅವರ ನಿಧನಕ್ಕೆ ಅತ್ಯುತ್ತಮ ಅಧಿಕಾರಿ ಇನ್ನಿಲ್ಲ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಸ್ನೇಹ ಜೀವಿ ಮಂಜುನಾಥ್ ಒಬ್ಬ ಉತ್ತಮ ಅಧಿಕಾರಿಯಾಗಿದ್ದರು ಎಂದು ಬಣ್ಣಿಸಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ ಪಿ.ಎಸ್.ಹರ್ಷ ಅವರು ನಮ್ಮೆಲ್ಲಾ ಪ್ರಯತ್ನಗಳೂ ಕೂಡಾ ಮಂಜುನಾಥ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಕಂಬನಿ ಮಿಡಿದಿದ್ದಾರೆ.


bengaluru

LEAVE A REPLY

Please enter your comment!
Please enter your name here