Tumkur: Teacher suspended for lewd message to student's mother
ತುಮಕೂರು:
ವಿದ್ಯಾರ್ಥಿಯ ತಾಯಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ ಶಿಕ್ಷಕನ ವಿರುದ್ಧ ಮಂಗಳವಾರ ಪ್ರಕರಣ ದಾಖಲಾಗಿದೆ. ಮಲ್ಲಾರಾಧ್ಯ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಿ. ಈತ ಪ್ರಸಿದ್ಧ ಧಾರ್ಮಿಕ ಮಠವೊಂದು ನಡೆಸುತ್ತಿರುವ ಶಾಲೆಯಲ್ಲಿ ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದಾರೆ.
ಈ ಸಂಬಂಧ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 354 (ಎ) ಮತ್ತು 506 ರ ಅಡಿಯಲ್ಲಿ
ಕ್ಯಾತಸಂದ್ರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂತ್ರಸ್ತೆಯ ಮಗ ವಸತಿ ಹಾಸ್ಟೆಲ್ ಮತ್ತು ಶಾಲೆಯಲ್ಲಿ ಓದುತ್ತಿದ್ದಾನೆ. ಲೆಡ್ಜರ್‌ನಿಂದ ಸಂತ್ರಸ್ತೆಯ ಮೊಬೈಲ್ ನಂಬರ್ ಪಡೆದ ಆರೋಪಿ ಆಕೆಯೊಂದಿಗೆ ಸಂಭಾಷಣೆ ಪ್ರಾರಂಭಿಸಿದ್ದಾನೆ.ಆರಂಭದಲ್ಲಿ ವಿದ್ಯಾರ್ಥಿಯ ಪ್ರಗತಿಯ ಬಗ್ಗೆ ಚರ್ಚಿಸುತ್ತಿದ್ದ ಅವರು ನಿಧಾನವಾಗಿ ಅಶ್ಲೀಲ ಸಂದೇಶಗಳನ್ನು ಕಳುಹಿಸಲು ಆರಂಭಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಶಿಕ್ಷಕ ತನಗೆ ಅಶ್ಲೀಲ ಮತ್ತು ಅಸಭ್ಯ ಸಂದೇಶಗಳನ್ನು ಕಳುಹಿಸಿದ್ದಾರೆ ಮತ್ತು ಸಹಕರಿಸದಿದ್ದರೆ ತನ್ನ ಮಗನನ್ನು ಫೇಲ್ ಮಾಡಿ, ಆತನ ಬದುಕನ್ನು ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.ನಂತರ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾಳೆ. ಈ ಕುರಿತು ತನಿಖೆ ನಡೆಯುತ್ತಿದೆ.
ಗ್ರಾಮಸ್ಥರ ದೂರಿನ ಬಗ್ಗೆ ತನಿಖೆ ನಡೆಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳು ಡಿಡಿಪಿಐಗೆ ವರದಿ ಸಲ್ಲಿಸಿದ್ದರು. ಗ್ರಾಮಸ್ಥರು ಮಾಡಿರುವ ಆರೋಪಗಳು ಮೇಲು ನೋಟಕ್ಕೆ ನೈಜವೆಂದು ಕಂಡು ಬಂದಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಈ ವರದಿಯ ಆಧಾರದ ಮೇಲೆ ಡಿಡಿಪಿಐ ಎಂ.ರೇವಣಸಿದ್ದಪ್ಪ ಅಮಾನತು ಮಾಡಿ ಸೋಮವಾರ ಆದೇಶಿಸಿದ್ದಾರೆ.
