Home ಬೆಂಗಳೂರು ನಗರ Tunnel Road in Bengaluru: ಎಕ್ಸ್ ಪ್ರೆಷನ್ ಆಫ್ ಇಂಟರೆಸ್ಟ್ ಅವಧಿ ಆಗಸ್ಟ್ 17 ರವರೆಗೆ...

Tunnel Road in Bengaluru: ಎಕ್ಸ್ ಪ್ರೆಷನ್ ಆಫ್ ಇಂಟರೆಸ್ಟ್ ಅವಧಿ ಆಗಸ್ಟ್ 17 ರವರೆಗೆ ವಿಸ್ತರಣೆ

157
0
Tunnel Road in Bengaluru: expression of Interest date extended to August 17
Tunnel Road in Bengaluru: expression of Interest date extended to August 17

ಬೆಂಗಳೂರು:

“ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಟನಲ್ ರಸ್ತೆ, ಮೇಲ್ಸೇತುವೆ ಸೇರಿದಂತೆ ಪರಿಹಾರ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಇದಕ್ಕಾಗಿ ಬಿಡಿಎ ಹಾಗೂ ಬಿಬಿಎಂಪಿ ಮೂಲಕ ಎಕ್ಸ್ ಪ್ರೆಷನ್ ಆಫ್ ಇಂಟರೆಸ್ಟ್ ಅನ್ನು ಕರೆಯಲಾಗಿತ್ತು. ಅದರ ಅವಧಿ ನಿನ್ನೆಗೆ ಮುಕ್ತಾಯಗೊಂಡಿತ್ತು. ಆದರೆ ಇನ್ನು ಹೆಚ್ಚಿನ ಸಂಸ್ಥೆಗಳು ಇದರಲ್ಲಿ ಭಾಗವಹಿಸಲು ಆಸಕ್ತಿ ತೋರಿರುವ ಹಿನ್ನೆಲೆಯಲ್ಲಿ ಈ ಅವಧಿಯನ್ನು ಒಂದು ವಾರ ಅಂದರೆ ಅ.17 ರವರೆಗೆ ವಿಸ್ತರಿಸಲಾಗಿದೆ. ಗ್ಲೋಬಲ್ ಟೆಂಡರ್ ಕರೆಯಲಾಗಿದೆ ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಟನಲ್ ರಸ್ತೆ ಹಾಗೂ ಮೇಲ್ಸೆತುವೆ ರಸ್ತೆಗಳು ಹೆಚ್ಚಾದರೆ ಕಾರುಗಳ ಬಳಕೆಗೆ ಪ್ರೋತ್ಸಾಹ ನೀಡಿದಂತೆ ಆಗುತ್ತದೆ. ಆಗ ಸಂಚಾರ ದಟ್ಟಣೆ ನಿಯಂತ್ರಣ ಹೇಗೆ ಸಾಧ್ಯ ಎಎಂಬ ಪ್ರಶ್ನೆಗೆ “ನಾವು ಜನರ ಸಮಯ ಉಳಿಸಲು ಅವಕಾಶ ಮಾಡಿಕೊಡುವತ್ತ ಗಮನಹರಿಸುತ್ತಿದ್ದೇವೆ. ಜನರಿಗೆ ಕಾರು ತೆಗೆದುಕೊಳ್ಳಬೇಡಿ ಎಂದು ಹೇಳಲು ಸಾಧ್ಯವಿಲ್ಲ. ಸಿಂಗಾಪುರದಂತೆ ಹೆಚ್ಚಿನ ತೆರಿಗೆ ಹಾಕಿ ಹೆಚ್ಚು ಕಾರು ಖರೀದಿ ಮಾಡದಂತೆ ನಿಯಂತ್ರಣ ಹೇರಲು ಸಾಧ್ಯವಿಲ್ಲ. ಇದು ಸ್ವತಂತ್ರ ದೇಶ. ಇಲ್ಲಿ ಯಾರು ಬೇಕಾದರೂ ಕಾರು ಖರೀದಿಸಬಹುದು. ಇನ್ನು ನಗರದ ಒಳಗಿನ ರಸ್ತೆಗಳ ಅಗಲೀಕರಣವೂ ಅಸಾಧ್ಯ. ಹೀಗಾಗಿ ಅನೇಕ ಯೋಜನೆ ರೂಪಿಸುತ್ತಿದ್ದೇವೆ” ಎಂದು ಉತ್ತರಿಸಿದರು.

ಮೆಟ್ರೋ ಸುರಂಗದಲ್ಲಿ ಕೇವಲ ಒಂದು ಮಾರ್ಗದಲ್ಲಿ ಮಾತ್ರ ಚಲಿಸಬಹುದಾಗಿದೆ. ಹೀಗಾಗಿ ಟನಲ್ ರಸ್ತೆಯಲ್ಲಿ ದ್ವಿಮುಖ ಮಾರ್ಗ ಇರಬೇಕು ಎಂದು ಸಲಹೆ ನೀಡಿದ್ದೇನೆ. ಅನೇಕ ಸಂಸ್ಥೆಗಳು ವಿನ್ಯಾಸ, ಆರ್ಥಿಕ ಸಾಮರ್ಥ್ಯದ ಬಗ್ಗೆ ಚರ್ಚೆ ಮಾಡಲು ಮುಂದೆ ಬಂದಿವೆ ಎಂದರು.

ಬ್ರ್ಯಾಂಡ್ ಬೆಂಗಳೂರು ಹಾಗೂ ಬೆಂಗಳೂರಿನ ಸಂಚಾರಿ ದಟ್ಟಣೆ ಸಮಸ್ಯೆಯನ್ನು ಹೇಗೆ ಬಗೆಹರಿಸಬಹುದು ಎಂಬ ವಿಚಾರವಾಗಿ ನಾವು ಅನೇಕ ಸುತ್ತು ಚರ್ಚೆ ಮಾಡಿದ್ದೇವೆ. ಸಾರ್ವಜನಿಕರಿಂದ 70 ಸಾವಿರಕ್ಕೂ ಹೆಚ್ಚು ಸಲಹೆಗಳು ಬಂದಿದ್ದು, ಇನ್ನು ಕೆಲವರ ಜತೆ ಚರ್ಚೆ ಮಾಡಿ ಸಲಹೆ ಪಡೆಯಲಿದ್ದೇನೆ ಎಂದರು.

ಶಾಲಾ ಮಕ್ಕಳಿಂದ, ಹಿರಿಯ ನಾಗರೀಕರು, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದವರಿಂದ ಸಲಹೆಗಳನ್ನು ಪಡೆದಿದ್ದು, ಇವನ್ನು ನಾಲ್ಕೈದು ವಿಭಾಗಗಳಲ್ಲಿ ಪರಿಶೀಲನೆ ಮಾಡಿ ಸಾರಾಂಶ ನೀಡುವ ಜವಾಬ್ದಾರಿಯನ್ನು ಕೆಲವು ಸಂಸ್ಥೆಗಳಿಗೆ ವಹಿಸಲಾಗಿದೆ.

ದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದೇನೆ. ನೆಲಮಂಗಲ, ಬಳ್ಳಾರಿ, ಕೋಲಾರ, ಹೊಸೂರು, ಮೈಸೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿಗಳು ಸೇರುವ ಹಾಗೂ ಬೆಂಗಳೂರು ನಗರದ ರಸ್ತೆಗಳು ಸಂಚಾರದಟ್ಟಣೆಗೆ ಕಾರಣವಾಗಿವೆ. ಇದರ ಪರಿಹಾರಕ್ಕೆ ಕೇಂದ್ರ ಸರ್ಕಾರ ಕೂಡ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಸಚಿವರಿಗೆ ಮನವಿ ಮಾಡಿದ್ದೇನೆ. ಯೋಜನೆ ರೂಪಿಸಿಕೊಂಡು ಬನ್ನಿ ಎಂದು ಅವರು ತಿಳಿಸಿದ್ದಾರೆ.”

LEAVE A REPLY

Please enter your comment!
Please enter your name here