
two accused Arrested of moral policing in Mangaluru
ಮಂಗಳೂರು:
ಬೀಚ್ ಗೆ ವಿಹಾರಕ್ಕೆ ತೆರಳಿದ್ದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬರ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ್ದು ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು 32 ವರ್ಷದ ಲಾಯ್ಡ್ ಪಿಂಟೋ ಮತ್ತು ದೀಕ್ಷಿತ್ ಎಂದು ಗುರುತಿಸಲಾಗಿದೆ.
ಶುಕ್ರವಾರ ಸಂಜೆ ಪಣಂಬೂರು ಬೀಚ್‌ಗೆ ಒಟ್ಟಿಗೆ ಬಂದಿದ್ದ ವೈದ್ಯಕೀಯ ಕಾಲೇಜಿನ ಇಬ್ಬರು ಹುಡುಗರು ಮತ್ತು ನಾಲ್ವರು ಹುಡುಗಿಯರನ್ನು ದ್ವಿಚಕ್ರವಾಹನದಲ್ಲಿ ಹಿಂಬಾಲಿಸಿಕೊಂಡು ಬಂದ ಯುವಕರ ತಂಡ ನಗರದ ಬಿಜೈ ಕಾಪಿಕಾಡ್ ಎಂಬಲ್ಲಿ ತಡೆದಿದ್ದು ಈ ವೇಳೆ ವಿದ್ಯಾರ್ಥಿ ಮಹಮ್ಮದ್ ಹಫೀಸ್(20) ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು.
ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ: ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ
ಗಾಯಗೊಂಡ ಹಫೀಜ್ ಪೊಲೀಸರಿಗೆ ದೂರು ನೀಡಿದ್ದು, ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸ್ಪಿಟಲ್ ಮ್ಯಾನೇಜ್ ಮೆಂಟ್ ಕೋರ್ಸ್ ಮಾಡುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರು ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳೊಂದಿಗೆ ತೆರಳಿದ್ದರು. ಇದರಿಂದಾಗಿ ಕಿಡಿಗೇಡಿಗಳು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಜೂನ್‍ನಲ್ಲಿ ಸಹ ಸೋಮೇಶ್ವರ ಬೀಚ್‍ಗೆ ತೆರಳಿದ್ದ ವಿದ್ಯಾರ್ಥಿಗಳ ಮೇಲೆ ಕೆಲವರು ಹಲ್ಲೆ ನಡೆಸಿದ್ದು ವರದಿಯಾಗಿತ್ತು.