ಮಂಗಳೂರು:
ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದ ಕೇನ್ಯ ಕಣ್ಕಲ್ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಎಂಬವರ ಪುತ್ರಿಯರಾದ 11 ವರ್ಷದ ಆವಂತಿಕಾ ಮತ್ತು 15 ವರ್ಷದ ಹಂಸಿಕಾ ಮೃತ ದುರ್ದೈವಿಗಳು.
ನದಿ ನೀರಲ್ಲಿ ಬಾಲಕಿಯರು ನಾಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಮತ್ತು ಸ್ಥಳೀಯರಿಂದ ಹುಡುಕಾಟ ನಡೆಸಿ ಬಾಲಕಿಯರ ಮೃತದೇಹಗಳನ್ನು ಹೊರತೆಗಿದ್ದಾರೆ.