
Two girls killed in a horrible accident on Bangalore-Mysore Expressway
ಚನ್ನಪಟ್ಟಣ/ಬೆಂಗಳೂರು:
ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬಾಲಕಿಯರು ದುರ್ಮರಣ ಹೊಂದಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ.
ಮೃತರನ್ನು 13 ವರ್ಷದ ಬಾಲಕಿ ಹಾಗೂ 20 ಯುವತಿ ಎಂದು ತಿಳಿದುಬಂದಿದೆ. ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಹೆಚ್.ಡಿ.ಕೋಟೆಯಿಂದ ಬೆಂಗಳೂರಿಗೆ ವಾಪಸ್ ಆಗುವ ವೇಳೆ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.
ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಾರೆ. ಕಾರ್ ನಲ್ಲಿದ್ದ ಒಟ್ಟು 6 ಜನರಲ್ಲಿ ಮೂವರಿಗೆ ಗಂಭೀರ ಗಾಯ, ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ