Home ಶಿವಮೊಗ್ಗ ಶಿವಮೊಗ್ಗ ಬಳಿ ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಮೃತ

ಶಿವಮೊಗ್ಗ ಬಳಿ ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಮೃತ

71
0
Two private buses collided head-on near Shimoga, two died on the spot
Two private buses collided head-on near Shimoga, two died on the spot

ಶಿವಮೊಗ್ಗ:

ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಹಲವು ಮಂದಿ ದುರ್ಮರಣ ಹೊಂದಿರುವ ಘಟನೆ ಶಿವಮೊಗ್ಗದ ಬಳಿ ಗುರುವಾರ ಸಂಜೆ ನಡೆದಿದೆ.

ಬಸ್​ನಲ್ಲಿ 60ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಸ್​​ಪಿ ಮಿಥುನ್​ಕುಮಾರ್​ ಪ್ರತಿಕ್ರಿಯೆ ನೀಡಿದ್ದು, 2 ಬಸ್​ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 6 ಜನರ ಸ್ಥಿತಿ ಚಿಂತಾಜನಕ, ಮೆಗ್ಗಾನ್​ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದರು.

ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಹಾಗೂ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಎರಡು ಖಾಸಗಿ ಬಸ್ ಗಳ ನಡುವೆ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಚೋರಡಿ ಬಳಿಯ ಕುಮದ್ವತಿ ಸೇತುವೆ ಮೇಲೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here