Home ಮಂಡ್ಯ ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಅಪರಿಚಿತ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಅಪರಿಚಿತ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವು

18
0
Two riders died on spot after bike collided with unknown vehicle on Bangalore-Mysore Expressway
Two riders died on spot after bike collided with unknown vehicle on Bangalore-Mysore Expressway
Advertisement
bengaluru

ಮಂಡ್ಯ:

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ (Bengaluru-Mysuru expressway) ಮತ್ತೊಂದು ಅಪಘಾತವಾಗಿದ್ದು, ಅಪರಿಚಿತ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ನಡೆದಿದೆ.

ಮೃತರನ್ನು 25 ವರ್ಷದ ಮಣಿ ಮತ್ತು 21 ವರ್ಷದ ಯುವಕ ಜನಾರ್ಧನ ಪೂಜಾರಿ ಎಂದು ಗುರುತಿಸಲಾಗಿದೆ. ಇಬ್ಬರು ಕೋಲಾರ ಹಾಗೂ ಕೊಪ್ಪಳ ಮೂಲದವರು. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ವೀಕೆಂಡ್​ ರಜೆ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಮದ್ದೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕರ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

bengaluru bengaluru


bengaluru

LEAVE A REPLY

Please enter your comment!
Please enter your name here