ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಗಲಭೆ ಕೇಸ್ ಗೆ ಸಂಬಧಪಟ್ಟಂತೆ ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಉದಯಗಿರಿ ಪೊಲೀಸ್ ಠಾಣೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಕೆಸರೆರಚಾಟ ಮುಂದುವರಿದಿದೆ. ಈ ನಡುವೆ ಮಹತ್ವದ ಬೆಳವಣಿಗೆ ನಡೆದಿದ್ದು, ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿ ಸತೀಶ್‌ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಆರೋಪಿ ಸತೀಶ್‌ಗೆ ಮೈಸೂರು ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಸರೋಜಾ ಅವರು ಆದೇಶ ಪ್ರಕಟಿಸಿದ್ದಾರೆ. ಆರೋಪಿ ಸತೀಶ್ ಪರ ವಕೀಲ ಹ.ಮಾ ಭಾಸ್ಕರ್ ವಾದ ಮಂಡಿಸಿದ್ದರು.