Home ರಾಜಕೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು ಉದ್ಬವ್ ಠಾಕ್ರೆ ಅವರದ್ದು: ಮುಖ್ಯಮಂತ್ರಿ ಯಡಿಯೂರಪ್ಪ

ಒಕ್ಕೂಟ ತತ್ವದ ವಿರುದ್ಧವಾದ ನಿಲುವು ಉದ್ಬವ್ ಠಾಕ್ರೆ ಅವರದ್ದು: ಮುಖ್ಯಮಂತ್ರಿ ಯಡಿಯೂರಪ್ಪ

40
0

ಬೆಂಗಳೂರು:

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಅವರ ಉದ್ಧಟತ ನದ ಪ್ರದರ್ಶನವಾಗಿದೆ.ಇದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು.ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಟ್ವೀಟ್ ಮೂಲಕ ಉದ್ಬವ್ ಠಾಕ್ರೆ ಟ್ವೀಟ್ ಗೆ ತಿರುಗೇಟು ನೀಡಿರುವ ಅವರು,ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶ ನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ.ಇದನ್ನು ನಾನು ಖಂಡಿಸುತ್ತೇನೆ.ಕ ರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ.ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ.ಸೌಹಾರ್ದಯುತ ವಾತಾವರಣವನ್ನು ಕೆಡಿಸುವ ಪ್ರಯತ್ನ ಮಹಾ ರಾಷ್ಟ್ರದ ಮುಖ್ಯಮಂತ್ರಿಗಳಿಂದ ಆಗುತ್ತಿರುವುದು ನೋವಿನ ಸಂಗತಿ.ಒಬ್ಬ ಭಾರತೀಯನಾಗಿ ಉದ್ಧವ್ ಠಾಕ್ರೆ ಅವರು ಒಕ್ಕೂಟ ತತ್ವವನ್ನು ಗೌರವಿಸುವ ಬದ್ಧತೆಯನ್ನು ತೋರಲಿ ಮುಖ್ಯಮಂತ್ರಿ ಯಡಿಯೂರಪ್ಪ ತಿರುಗೇ ಟು ನೀಡಿದ್ದಾರೆ. UNI

LEAVE A REPLY

Please enter your comment!
Please enter your name here