Home ಉಡುಪಿ Udupi mother and child massacre case| ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣ: ಆರೋಪಿ...

Udupi mother and child massacre case| ಉಡುಪಿಯಲ್ಲಿ ತಾಯಿ, ಮಕ್ಕಳ ಕಗ್ಗೊಲೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

53
0
Udupi mother and child massacre case| Accused Praveen Chowgule shifted to Bengaluru Central Jail
Udupi mother and child massacre case| Accused Praveen Chowgule shifted to Bengaluru Central Jail

ಉಡುಪಿ:

ಪ್ರಾಣ ಭಯ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿದ್ದ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಇಂದು ಬೆಂಗಳೂರಿನ ಪರಪ್ಪನ‌ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಇಂದು ಸ್ಥಳಾಂತರಿಸಲಾಗಿದೆ.

ನ.22ರಿಂದ ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರವೀಣ್ ಚೌಗುಲೆಯನ್ನು ಗಂಭೀರ ಪ್ರಕರಣದ ಕಾರಣಕ್ಕೆ ಸುರಕ್ಷತೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಸೆಲ್ ಮತ್ತು ವಿಶೇಷ ಭದ್ರತೆಯೊಂದಿಗೆ ಇರಿಸಲಾಗಿತ್ತು. ಜಿಲ್ಲಾ ಕಾರಾಗೃಹದಲ್ಲಿನ ಭದ್ರತೆ ಕೊರತೆಯ ಹಿನ್ನೆಲೆಯಲ್ಲಿ ಆತನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಜೈಲಾಧಿಕಾರಿಗಳು ಉಡುಪಿ ನ್ಯಾಯಾಲಯದಿಂದ ಅನುಮತಿಯನ್ನು ಪಡೆದುಕೊಂಡಿದ್ದರು.

ಇದೀಗ ಬಂಧಿಖಾನೆ ಇಲಾಖೆಯ ಮೇಲಾಧಿಕಾರಿಗಳ ಅನುಮತಿ ಹಾಗೂ ನಿರ್ದೇಶನದಂತೆ ಇಂದು ಬೆಳಗ್ಗೆ ಪೊಲೀಸ್ ಭದ್ರತೆಯಲ್ಲಿ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಂಗಳೂರಿನ ಕಾರಾಗೃಹಕ್ಕೆ ಕೊಂಡೊಯ್ಯಲಾಯಿತು. ಸಂಜೆ ವೇಳೆ ಬೆಂಗಳೂರು ತಲುಪಿದ್ದು ಅಲ್ಲಿನ ಕೇಂದ್ರ ಕಾರಾಗೃಹಕ್ಕೆ ಆರೋಪಿಯನ್ನು ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here