ಸಂಗ್ರಹ ಚಿತ್ರ: ಸಿಸಿಟಿವಿ ಪರದೆಗಳ ಮೂಲಕ ಪರೀಕ್ಷೆಯ ಮೇಲೆ ನಿಗಾ ವಹಿಸುತ್ತಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಿಬ್ಬಂದಿ.
ಬೆಂಗಳೂರು: 2026ನೇ ಸಾಲಿನ ಯುಜಿ ಆಯುಷ್ ಕೋರ್ಸ್ಗಳ ಪ್ರವೇಶಕ್ಕೆ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ.
ಅಂತಿಮ ಫಲಿತಾಂಶವನ್ನು ನವೆಂಬರ್ 29ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ನವೆಂಬರ್ 28ರ ಸೂಚನೆಯಲ್ಲಿ ತಿಳಿಸಿದ್ದಾರೆ.

ಸೀಟು ಹಂಚಿಕೆಯಾದ ಅಭ್ಯರ್ಥಿಗಳು ನವೆಂಬರ್ 30ರೊಳಗೆ ಶುಲ್ಕ ಪಾವತಿಸಿ, ಹಂಚಿಕೆಯಾದ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು.
