ಬೆಂಗಳೂರು:
ಸ್ಮಾರ್ಟ್ ಸಿಟಿ ಅಭಿಯಾನದಡಿ 7 ಸ್ಮಾರ್ಟ್ ಸಿಟಿಗಳಲ್ಲಿ 400 ಕೋಟಿ ರೂಪಾಯಿಯ 162 ಯೋಜನೆಗಳನ್ನು ಪೂರ್ಣಗೊಳಿಸಲಾಗಿದ್ದು 6,233 ಕೋಟಿ ರೂಪಾಯಿಗಳ 345 ಯೋಜನೆಗಳು ಪ್ರಗತಿಯಲ್ಲಿವೆ ಎಂದು ರಾಜ್ಯಪಾಲ ವಜುಬಾಯಿ ವಾಲಾ ತಿಳಿಸಿದ್ದಾರೆ.
ಇಂದಿನಿಂದ ಆರಂಭಗೊಂಡ ವಿಧಾನಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರ ವಜುಬಾಯಿ ವಾಲಾ ಭಾಷಣ ಮಾಡಿದರು.
ಬೆಂಗಳೂರು ಉಪನಗರ ರೈಲ್ವೆ ಯೋಜನೆಯನ್ನು 52 ಬೆಂಗಳೂರು ಮಹಾನಗರ ಸಾರಿಗೆ ನಿಗಮವು 6 ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಸ್ವೀಕರಿಸಿದೆ. 4,755 ಕೋಟಿ ರೂಪಾಯಿಗಳಷ್ಟು ಕಿ.ಮೀ. ರಸ್ತೆಗಳನ್ನು 202 ಸೇತುವೆಗಳನ್ನು ಅನುಷ್ಠಾನಗೊಳಿಸಲು ಅನುಮೋದಿಸಿದೆ.
ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಾಲೊನಿಗಳಲ್ಲಿ 447 ಕಿ.ಮೀ. ಕಾಂಕ್ರೀಟ್ ರಸ್ತೆಗಳನ್ನು ನಿರ್ಮಿಸಿದೆ. ಮತ್ತು ಯೋಜನೆಯಡಿಯಲ್ಲಿ 588 ಕಿ.ಮೀ. ರಸ್ತೆ ಅಭಿವೃದ್ಧಿ ಮತ್ತು ಮುಖ್ಯಮಂತ್ರಿಗಳ ಗ್ರಾಮೀಣ ರಸ್ತೆ ಅಭಿವೃದ್ಧಿ ಯೋಜನೆಯಡಿಯಲ್ಲಿ 143 ಕಿ.ಮೀ. ರಸ್ತೆ ಅಭಿವೃದ್ಧಿ ಕಾರ್ಯವು ಪೂರ್ಣಗೊಂಡಿದೆ . 9,601 ಕಿ.ಮಿ. ಜಿಲ್ಲಾ ಹೆದ್ದಾರಿಗಳನ್ನು ರಾಜ್ಯ ಹೆದ್ದಾರಿಗಳಾಗಿ ಮೇಲ್ಮರ್ಜೆಗೆ ಏರಿಸಲಾಗಿದ್ದು , 15,510 ಕಿ.ಮೀ. ಗ್ರಾಮೀಣ ರಸ್ತೆಗಳನ್ನು ಪ್ರಧಾನ ಜಿಲ್ಲಾ ರಸ್ತೆಗಳಾಗಿ ಮೇಲ್ಮರ್ಜೆಗೆ ಏರಿಸಲಾಗಿದೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಸಂಚಾರವು ಸುಸ್ಥಿರಗೊಳಿಸಲು 1,850 ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.